ಸಾರಾಂಶ
ರಾಮನಾಥಪುರದ ದೊಡ್ಡಮಗ್ಗೆ ಹೋಬಳಿಯ ಸಂತೆಮರೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ವಿವಿಧ ರೀತಿಯ ಹಣ್ಣು, ಹಂಪಲು ಗಿಡ ನೆಡುವ ಕಾರ್ಯಕ್ರಮವನ್ನು ಸ್ವಸ್ಥ ಸಮಾಜ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ರಾಮಸ್ವಾಮಿ ನೆರವೇರಿಸಿದರು. ಶಾಲಾ ವಿದ್ಯಾರ್ಥಿಗಳಲ್ಲಿ ಪರಿಸರದ ಅರಿವು ಮೂಡಿಸಿ ಮತ್ತು ಪ್ಲಾಸ್ಟಿಕ್ ಮುಕ್ತ ದೇಶವನ್ನಾಗಿಸಬೇಕು ಎಂದು ಸಲಹೆ ನೀಡಿದರು.
ಕನ್ನಡಪ್ರಭ ವಾರ್ತೆ ರಾಮನಾಥಪುರ
ದೊಡ್ಡಮಗ್ಗೆ ಹೋಬಳಿಯ ಸಂತೆಮರೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ವಿವಿಧ ರೀತಿಯ ಹಣ್ಣು, ಹಂಪಲು ಗಿಡ ನೆಡುವ ಕಾರ್ಯಕ್ರಮವನ್ನು ಸ್ವಸ್ಥ ಸಮಾಜ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ರಾಮಸ್ವಾಮಿ ನೆರವೇರಿಸಿದರು.ದೊಡ್ಡಮಗ್ಗೆ ಹೋಬಳಿ ಸಂತೆಮರೂರು ಗ್ರಾಮದ ಶಾಲಾ ವಿದ್ಯಾರ್ಥಿಗಳಲ್ಲಿ ಪರಿಸರದ ಅರಿವು ಮೂಡಿಸಿ ಮತ್ತು ಪ್ಲಾಸ್ಟಿಕ್ ಮುಕ್ತ ದೇಶವನ್ನಾಗಿಸಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಪ್ರಮುಖರಾದ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು ಮಾದೇಶ್, ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಸೋಮಣ್ಣ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ಶ್ರೀನಿವಾಸ್, ನಂಜಯ್ಯ, ಮಾಜಿ ತಾಲೂಕು ಪಂಚಾಯಿತಿ ಸದಸ್ಯರು ಶೇಷಯ್ಯ, ಎಸ್‌ಡಿಎಂಸಿ ಅಧ್ಯಕ್ಷರಾದ ಧರ್ಮಣ್ಣ ಎಂ.ಜಿ ಹಾಗೂ ಸಮಿತಿಯ ಗೌರವಾನ್ವಿತ ಸದಸ್ಯರಾದ ಮುಗುಳೂರು ಪಾಂಡುರಂಗ, ಮೋಹನ್ ಕೆ ಅಬ್ಬೂರು, ಕಾಂತರಾಜು, ನಸ್ರುಲ್ಲಾ ಟಿಪ್ಪು, ಮಲ್ಲಿಕಾ, ಮತ್ತು ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.