ರಂಭಾಪುರಿ ಶ್ರೀಗಳಿಗೆ ಆಯೋಧ್ಯೆ ಆಹ್ವಾನ ಪತ್ರಿಕೆ

| Published : Jan 14 2024, 01:33 AM IST

ಸಾರಾಂಶ

ಜ.22ರಂದು ಆಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಹಾಗೂ ಶ್ರೀರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ಆಹ್ವಾನ ಪತ್ರಿಕೆಯನ್ನು ಶನಿವಾರ ಶ್ರೀಪೀಠದಲ್ಲಿ ವಿಶ್ವ ಹಿಂದೂ ಪರಿಷತ್ ಪದಾಧಿಕಾರಿಗಳು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಬಾಳೆಹೊನ್ನೂರು: ಜ.22ರಂದು ಆಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಹಾಗೂ ಶ್ರೀರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ಆಹ್ವಾನ ಪತ್ರಿಕೆಯನ್ನು ಶನಿವಾರ ಶ್ರೀಪೀಠದಲ್ಲಿ ವಿಶ್ವ ಹಿಂದೂ ಪರಿಷತ್ ಪದಾಧಿಕಾರಿಗಳು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಆಹ್ವಾನ ಸ್ವೀಕರಿಸಿದ ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ರಾಮಮಂದಿರ ನಿರ್ಮಾಣ ಬಹುದಿನಗಳ ಕನಸಾಗಿದ್ದು, ಬಹುಸಂಖ್ಯಾತ ಹಿಂದೂಗಳ ನಿರೀಕ್ಷೆಯೂ ಆಗಿತ್ತು. ಮಂದಿರ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಾಗಿರುವುದು ಬಹಳ ಸಂತಸ ತಂದಿದೆ. ಇದರ ಲೋಕಾರ್ಪಣೆಗೆ ಕೋಟ್ಯಂತರ ರಾಮಭಕ್ತರು ಕಾತರದಲ್ಲಿದ್ದಾರೆ ಎಂದರು.

ವಿಹಿಂಪ ಹಾಸನ ವಿಭಾಗದ ಸಹ ಕಾರ್ಯದರ್ಶಿ ಆರ್.ಡಿ.ಮಹೇಂದ್ರ, ಪ್ರಮುಖರಾದ ಬಿ.ಜಗದೀಶ್ಚಂದ್ರ, ಕೆ.ಟಿ.ವೆಂಕಟೇಶ ಮತ್ತಿತರರು ಇದ್ದರು.೧೩ಬಿಹೆಚ್‌ಆರ್ ೩: ಆಯೋಧ್ಯೆ ರಾಮಮಂದಿರ ಉದ್ಘಾಟನೆಯ ಆಹ್ವಾನ ಪತ್ರಿಕೆಯನ್ನು ವಿಹಿಂಪ ಪದಾಧಿಕಾರಿಗಳು ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಆರ್.ಡಿ.ಮಹೇಂದ್ರ, ಬಿ.ಜಗದೀಶ್ಚಂದ್ರ, ಕೆ.ಟಿ.ವೆಂಕಟೇಶ ಇದ್ದರು.