ಸಾರಾಂಶ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳಇದೇ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದ್ದು, ಅಂದು 11 ಗಂಟೆಯಿಂದ 1:00 ವರೆಗೆ 108 ಸಲ ಶ್ರೀ ರಾಮ ಜಯರಾಮ, ಜಯ ಜಯ ರಾಮ ಜಪ ಪಟಿಸಬೇಕು. ಸಾಯಂಕಾಲ ಸೂರ್ಯಾಸ್ತದ ನಂತರ ತಮ್ಮ ಮನೆಗಳ ಮುಂದೆ ದೀಪ ಹಚ್ಚಬೇಕು. ನಾವು ನೀಡಿದ ಅಕ್ಷತೆ ಪೂಜಿಸಿ ನಂತರ ಅವುಗಳೊಂದಿಗೆ ಇನ್ನು ಸ್ವಲ್ಪ ಅಕ್ಷತೆಯನ್ನು ಕೂಡಿಸಿ ಅನ್ನ ಸಂತರ್ಪಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ತಾಲೂಕಿನ ಗೆದ್ದಲಮರಿ ಗ್ರಾಮದ ಹನುಮಾನ್ ದೇವಸ್ಥಾನ ಹಾಗೂ ಹರಿಂದ್ರಾಳ ಹನುಮಾನ್ ದೇವಸ್ಥಾನದಲ್ಲಿ ಅಯೋಧ್ಯದ ರಾಮಮಂದಿರ ಉದ್ಘಾಟನೆಗೊಳ್ಳುತ್ತಿರುವುದರಿಂದ ಶ್ರೀರಾಮನ ಭಾವಚಿತ್ರವುಳ್ಳ ಬಿತ್ತಿ ಪತ್ರ ಹಾಗೂ ಅಕ್ಷತೆ ಮನೆ ಮನೆಗೆ ತಲುಪಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತಾಡಿದ ಅವರು, ಕೋಟ್ಯಂತರ ಹಿಂದೂಗಳ ಕನಸು ನನಸಾಗುವ ಸಮಯ ಸನ್ನಿಹಿತವಾಗಿದೆ. ಕೋಟ್ಯಂತರ ಭಕ್ತರು ಈಗಾಗಲೇ ನಾನಾ ರೀತಿಯ ಕೊಡುಗೆ ನೀಡಿದ್ದಾರೆ ಎಂದರು. ರಾಮಮಂದಿರ ನಿರ್ಮಾಣಕ್ಕೆ ಕಾಣಿಕೆ ನೀಡಿರುವವರ ಮನೆಬಾಗಿಲಿಗೆ ಪ್ರಸಾದ ತಲುಪಬೇಕು. ಈ ನಿಟ್ಟಿನಲ್ಲಿ ಟ್ರಸ್ಟ್‌ನವರು ಪ್ರತಿಯೊಬ್ಬರ ಮನೆಗೂ ರಾಮದೇವರ ಪ್ರಸಾದ ತಲುಪಿಸುವ ಹಿತದೃಷ್ಟಿಯಿಂದ ಪ್ರತಿ ಊರು, ಗ್ರಾಮಕ್ಕೆ ಮಂತ್ರಾಕ್ಷತೆ, ಭಾವಚಿತ್ರ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಮಂತ್ರಾಕ್ಷತೆ ರೂಪದಲ್ಲಿ ದೇವರೇ ಮನೆಗೆ ಬರಲಿದ್ದಾರೆ. ಅದನ್ನು ಜಾಗರೂಕವಾಗಿರಿಸಿ ಪೂಜೆ ಮಾಡುವ ಪ್ರತಿಜ್ಞೆ ಮಾಡಬೇಕು. ಜ.22ರಂದು ಪ್ರತಿ ಗ್ರಾಮದಲ್ಲಿ ಹರೇ ರಾಮ್, ಭಜನೆ ಹಾಡುಗಳನ್ನು ಹಾಡಬೇಕು. ಸಂಜೆ 5 ಗಂಟೆಗೆ ಜ್ಯೋತಿ ಬೆಳಗಿ ಉತ್ತರ ದಿಕ್ಕಿಗೆ ಆರತಿ ಬೆಳಗುವ ಮೂಲಕ ಇದನ್ನು ಅವಿಸ್ಮರಣೀಯ ದಿನವನ್ನಾಗಿಸಬೇಕು ಎಂದರು.ಈ ವೇಳೆ ಹಿರಿಯರು ವಿಶ್ವ ಹಿಂದೂ ಪರಿಷತ್ತಿನ ಪ್ರಮುಖ ಪ್ರಭು ಕಡಿ ರಾಂಪುರ, ಅರವಿಂದ್ ಕಾಸಿನ ಕುಂಟಿ ಹಾಗೂ ವಿಶ್ವ ಹಿಂದೂ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರವಿ ಪವಾರ್ ಇದ್ದರು. ಕೋಟ್.. ರಾಮಮಂದಿರ ನಿರ್ಮಾಣಕ್ಕೆ ಕಾಣಿಕೆ ನೀಡಿರುವವರ ಮನೆಬಾಗಿಲಿಗೆ ಪ್ರಸಾದ ತಲುಪಬೇಕು. ಈ ನಿಟ್ಟಿನಲ್ಲಿ ಟ್ರಸ್ಟ್‌ನವರು ಪ್ರತಿಯೊಬ್ಬರ ಮನೆಗೂ ರಾಮದೇವರ ಪ್ರಸಾದ ತಲುಪಿಸುವ ಹಿತದೃಷ್ಟಿಯಿಂದ ಪ್ರತಿ ಊರು, ಗ್ರಾಮಕ್ಕೆ ಮಂತ್ರಾಕ್ಷತೆ, ಭಾವಚಿತ್ರ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಮಂತ್ರಾಕ್ಷತೆ ರೂಪದಲ್ಲಿ ದೇವರೇ ಮನೆಗೆ ಬರಲಿದ್ದಾರೆ. ಅದನ್ನು ಜಾಗರೂಕವಾಗಿರಿಸಿ ಪೂಜೆ ಮಾಡುವ ಪ್ರತಿಜ್ಞೆ ಮಾಡಬೇಕು.ಪ್ರಭುಗೌಡ ದೇಸಾಯಿ
. ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ