ಬಾಳೆಹೊನ್ನೂರುದತ್ತಪೀಠವನ್ನು ಸಂಪೂರ್ಣ ಹಿಂದೂಗಳ ಪೀಠವಾಗಿ ವಶಕ್ಕೆ ತೆಗೆದುಕೊಳ್ಳಲು ಅಯೋಧ್ಯೆಯಲ್ಲಿ ಈ ಹಿಂದೆ ನಡೆದ ಡಿ.6ರ ಕರಸೇವೆಯನ್ನು ಮತ್ತೆ ಹಿಂದೂಗಳಿಗೆ ನೆನಪಿಸಬೇಕಿದ್ದು, ಶೀಘ್ರದಲ್ಲಿ ದತ್ತಪೀಠಕ್ಕಾಗಿ ಕರಸೇವೆ ನಡೆಸಬೇಕಾಗುತ್ತದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.

ದತ್ತಮಾಲಾ ಅಭಿಯಾನದ ಧಾರ್ಮಿಕ ಸಭೆಯಲ್ಲಿ ಮುತಾಲಿಕ್ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ದತ್ತಪೀಠವನ್ನು ಸಂಪೂರ್ಣ ಹಿಂದೂಗಳ ಪೀಠವಾಗಿ ವಶಕ್ಕೆ ತೆಗೆದುಕೊಳ್ಳಲು ಅಯೋಧ್ಯೆಯಲ್ಲಿ ಈ ಹಿಂದೆ ನಡೆದ ಡಿ.6ರ ಕರಸೇವೆಯನ್ನು ಮತ್ತೆ ಹಿಂದೂಗಳಿಗೆ ನೆನಪಿಸಬೇಕಿದ್ದು, ಶೀಘ್ರದಲ್ಲಿ ದತ್ತಪೀಠಕ್ಕಾಗಿ ಕರಸೇವೆ ನಡೆಸಬೇಕಾಗುತ್ತದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.

ದತ್ತ ಜಯಂತಿ ಹಾಗೂ ದತ್ತಮಾಲಾ ಅಭಿಯಾನದ ಅಂಗವಾಗಿ ವಿಎಚ್‌ಪಿ ಹಾಗೂ ಬಜರಂಗದಳ ಮಂಗಳವಾರ ಆಯೋಜಿಸಿದ್ದ ಶೋಭಾಯಾತ್ರೆ, ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದರು. ದತ್ತಪೀಠಕ್ಕೆ ಪೌರಾಣಿಕ ಇತಿಹಾಸ ಹಾಗೂ ದಾಖಲೆಗಳ ಆಧಾರವಿದೆ. ಇಷ್ಟಿದ್ದರೂ ಹೋರಾಟ ಮಾಡಿ ತೆಗೆದುಕೊಳ್ಳುವ ಪರಿಸ್ಥಿತಿ ಬಂದಿರುವುದು ದುರ್ದೈವದ ಸಂಗತಿ. ದತ್ತಪೀಠವನ್ನು ಬಾಬಾ ಬುಡನ್ ಗಿರಿ ಎಂದು ಬುಡಬುಡಿಕೆ ಬಾರಿಸಲಾಗುತ್ತಿದೆ. ಆದರೆ ದತ್ತಪೀಠದ ಬಗ್ಗೆ ಹಲವಾರು ದಾಖಲೆಗಳಿದ್ದು, ನೂರಾರು ವರ್ಷಗಳ ಹಿಂದೆ ದತ್ತ ಜಯಂತಿಗೆ ಬಾಳೆಹೊನ್ನೂರು ರಂಭಾಪುರಿ ಪೀಠದಿಂದ ಕಪ್ಪ ಕಾಣಿಕೆ, ದವಸ ಧಾನ್ಯಗಳನ್ನು ಕಳುಹಿಸಲಾಗುತ್ತಿತ್ತು. ಮೈಸೂರು ರಾಜಮನೆತದ ಜಯಚಾಮರಾಜ ಒಡೆಯರ್ ದತ್ತ ಜಯಂತಿಗೆ 3 ದಿನಗಳ ಕಾಲ ಇಲ್ಲಿಗೆ ಬಂದು ವಾಸ್ತವ್ಯ ಮಾಡುತ್ತಿದ್ದರು.ದತ್ತಪೀಠದಲ್ಲಿ ಆಧ್ಯಾತ್ಮಿಕ ಶಕ್ತಿಯಿದ್ದು, ಇದೊಂದು ಪುಣ್ಯಕ್ಷೇತ್ರ. ಆದರೆ ಇದನ್ನು ಇಸ್ಲಾಮೀಕರಣ ಮಾಡಲಾಗುತ್ತಿದೆ. ಗುಹೆ ಒಳಗೆ ಹೆಣವಿಲ್ಲದ ಗೋರಿಗಳನ್ನು ನಿರ್ಮಾಣ ಮಾಡಲಾಗಿದೆ. ತಂತ್ರಗಳಿಗೆ ದತ್ತಪೀಠ ಬಲಿಯಾಗಿದೆ ಎಂದರು.ಇಸ್ಲಾಮಿನಲ್ಲಿ ಮೂರ್ತಿ ಪೂಜೆ, ಆರತಿ, ಅಭಿಷೇಕ ಇವುಗಳಿಗೆಲ್ಲ ನಿಷೇಧವಿದ್ದರೂ ಸಹ, ಶಾಖಾದ್ರಿ ವಂಶಸ್ಥರು ಇಸ್ಲಾಂ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ದತ್ತಪೀಠದ ಹೋರಾಟಕ್ಕೆ ಶಾಖಾದ್ರಿ ಕುಟುಂಬ ಕಳೆದ ೩೦ ವರ್ಷಗಳಿಂದ ಪ್ರಚೋದನೆ ಮಾಡುತ್ತಾ ಶಾಂತಿ ಕದಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ದತ್ತಪೀಠ ಧಾರ್ಮಿಕ ದತ್ತಿ ಇಲಾಖೆ ಎಂದು ಹೇಳಿದೆ. ಇದು ಹಿಂದೂಗಳಿಗೆ ಸೇರಿದ್ದಾಗಿದೆ. ಮುಸಲ್ಮಾನ ರಿಗಾಗಿ, ಮಸೀದಿ, ಗೋರಿಗಳಾಗಿ ವಕ್ಫ್ ಬೋರ್ಡ್ ಇದೆ. ಶಾಖಾದ್ರಿ ಕುಟುಂಬದ ಗೋರಿಗಳು ಇರುವುದು ನಾಗೇನ ಹಳ್ಳಿಯಲ್ಲಿ. ಆದರೆ ದತ್ತಪೀಠಕ್ಕೆ ಬಂದು ಇಲ್ಲಿನ ಪಾವಿತ್ರ್ಯತೆ ಹಾಳು ಮಾಡಿದ್ದಾರೆ. ಶಾಖಾದ್ರಿ ಕುಟುಂಬ, ಮುಸ್ಲಿಂ ಸಮಾಜ ಗೌರವಯುತವಾಗಿ ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸಿದರೆ ಹಿಂದೂ-ಮುಸಲ್ಮಾನರು ಅಣ್ಣ ತಮ್ಮಂದಿರಂತೆ ಇರಬಹುದು. ಇಲ್ಲದಿದ್ದರೆ ಡಿ.6ರ ಅಯೋಧ್ಯೆ ಕರಸೇವೆ ನೆನಪಿಸಬೇಕಾಗುತ್ತದೆ. ಜೈ ದತ್ತಾತ್ರೇಯ ಎಂದು ಕರಸೇವೆಗಾಗಿ ದತ್ತಪೀಠಕ್ಕೆ ಹೊರಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಸ್ಲಿಂ ಭಯೋತ್ಪಾದಕರು ಹಿಂದೂ ಎಂದು ಗುರಿಯಾಗಿಸಿ ಹತ್ಯೆ ಮಾಡುತ್ತಿದ್ದು, ಇದು ನಿಲ್ಲಬೇಕಿದೆ. ಹಿಂದೂಗಳು, ಹಿಂದೂಗಳ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ವಹಿವಾಟು ನಡೆಸಬೇಕಿದೆ. ಇಲ್ಲದಿದ್ದರೆ ನಾವೇ ವೈರಿಗಳನ್ನು ಬೆಳೆಸಿದಂತೆ ಆಗಲಿದೆ.ಚಿಕ್ಕಮಗಳೂರು ಜಿಲ್ಲೆ ಹಾಗೂ ಸಕಲೇಪುರ ಭಾಗಗಳಲ್ಲಿ ಕಾಫಿ ಬೆಳೆಗಾರರು ಬಾಂಗ್ಲಾ ಕಾರ್ಮಿಕರನ್ನು ಕರೆಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಬೆಳೆಗಾರರಿಗೆ ಇಲ್ಲಿನ ಶಾಂತಿ, ಧರ್ಮ ಉಳಿವಿನ ಅಗತ್ಯವಿದ್ದರೆ ಆ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಅವರಿಗೆ ಉತ್ತರ ಕರ್ನಾಟಕದಿಂದ ಸಾವಿರ ಸಂಖ್ಯೆಯಲ್ಲಿ ಕಾರ್ಮಿಕರನ್ನು ನಾನೇ ಕರೆಯಿಸಿಕೊಡುತ್ತೇನೆ. ಮುಂದಿನ ದಿನಗಳಲ್ಲಿ ದತ್ತ ಪೀಠದ ಹೋರಾಟದ ಜೊತೆಗೆ ಬಾಂಗ್ಲಾ ಕಾರ್ಮಿಕರ ವಿರುದ್ಧವೂ ಹೋರಾಟ ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.ಜೈ ಮಾತೃಭೂಮಿ ಆಟೋ ಚಾಲಕರ ಸಂಘದ ಅಧ್ಯಕ್ಷ ಎಸ್.ಸಂದೇಶ್, ವಿಹಿಂಪ ಜಿಲ್ಲಾಧ್ಯಕ್ಷ ಕೆ.ಪಿ.ಸುರೇಶ್‌ಕುಮಾರ್, ಬಜರಂಗದಳ ಜಿಲ್ಲಾ ಸಂಯೋಜಕ ಅಜಿತ್ ಕುಲಾಲ್, ಜಿಲ್ಲಾ ಕಾರ್ಯದರ್ಶಿ ದಿವಿರ್ ಮಲ್ನಾಡ್, ತಾಲ್ಲೂಕು ಸಂಯೋಜಕ ಅಣ್ಣಪ್ಪ ಹೇರೂರು, ಮಂಜುನಾಥ್ ಶೆಟ್ಟಿ, ಮಾತೃಶಕ್ತಿ ತಾಲೂಕು ಸಂಯೋಜಕಿ ಪ್ರೇಮಾ ರವೀಂದ್ರ, ವಿಎಚ್‌ಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ್, ಪ್ರಮುಖರಾದ ಜಗದೀಶ್ಚಂದ್ರ, ಬಿ.ವೆಂಕಟೇಶ್, ಸಂದೀಪ್‌ಶೆಟ್ಟಿ, ಸುಮೇಶ್ ಶೆಟ್ಟಿ, ಸುಜಿತ್ ಪೂಜಾರಿ ಮತ್ತಿತರರು ಹಾಜರಿದ್ದರು.-- (ಬಾಕ್ಸ್)--

ಉಗ್ರ ಭಾಷಣ ಮಾಡದಂತೆ ಪೊಲೀಸರ ನೋಟಿಸ್ ಬಾಳೆಹೊನ್ನೂರಿನಲ್ಲಿ ನಡೆಯುತ್ತಿರುವ ಧಾರ್ಮಿಕ ಸಭೆಯಲ್ಲಿ ಉಗ್ರ ಭಾಷಣ ಮಾಡದಂತೆ ನನಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಬಾಳೆಹೊನ್ನೂರು ಶಾಂತಿಯುತವಾಗಿ ಇಲ್ಲಿ ಶಾಂತಿ ಕದಡಿದರೆ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಆದರೆ ಪೊಲೀಸರಿಗೆ ಜಿಲ್ಲೆಯಲ್ಲಿ ಬೀಡು ಬಿಟ್ಟಿರುವ ಅಕ್ರಮ ಬಾಂಗ್ಲಾ ನುಸುಳುಕೋರರು ಕಾಣುತ್ತಿಲ್ಲವೇ ಎಂದು ಕಿಡಿಕಾರಿದರು.ರಾಜ್ಯದಲ್ಲಿ ಅಕ್ರಮ ಗೋ ಕಳ್ಳತನ, ಗೋ ಹತ್ಯೆ, ಗೋ ಮಾಂಸ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಇವುಗಳೆಲ್ಲ ಸಂಘಟನೆಯ ಕಾರ್ಯಕರ್ತರ ಕಣ್ಣಿಗೆ ಕಾಣುತ್ತಿವೆ. ಆದರೆ ಪೊಲೀಸರಿಗೆ ಇದು ಕಾಣುತ್ತಿಲ್ಲ. ಹಾಗಾದರೆ ಪೊಲೀಸರ ಕಣ್ಣಿಗೆ ಮಣ್ಣು ಅಥವಾ ಸೆಗಣಿ ಬಿದ್ದಿದೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು.೦೩ಬಿಹೆಚ್‌ಆರ್ ೨:

ಬಾಳೆಹೊನ್ನೂರಿನಲ್ಲಿ ವಿಹಿಂಪ, ಬಜರಂಗದಳ ಆಯೋಜಿಸಿದ್ದ ದತ್ತಜಯಂತಿಯ ಧಾರ್ಮಿಕ ಸಭೆಯನ್ನು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಉದ್ಘಾಟಿಸಿದರು. ಸಂದೇಶ್, ಸುರೇಶ್‌ಕುಮಾರ್, ಅಜಿತ್ ಕುಲಾಲ್, ದಿವಿರ್ ಮಲ್ನಾಡ್, ಅಣ್ಣಪ್ಪ ಇದ್ದರು.