ಸೋಮವಾರಪೇಟೆ : ಇಲ್ಲಿನ ಶ್ರೀ ಕ್ಷೇತ್ರ ಧರ್ಮಸ್ಥಳ ತಾಲೂಕು ಗ್ರಾಮೀಣ ಯೋಜನಾಧಿಕಾರಿಗಳ ಕಚೇರಿಯಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಕಚೇರಿಯಲ್ಲಿ ಆಯುಧಪೂಜೆ ಕಾರ್ಯಕ್ರಮ ನಡೆಸಲಾಯಿತು.
ಸೋಮವಾರಪೇಟೆ : ಇಲ್ಲಿನ ಶ್ರೀ ಕ್ಷೇತ್ರ ಧರ್ಮಸ್ಥಳ ತಾಲೂಕು ಗ್ರಾಮೀಣ ಯೋಜನಾಧಿಕಾರಿಗಳ ಕಚೇರಿಯಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಕಚೇರಿಯಲ್ಲಿ ಆಯುಧಪೂಜೆ ಕಾರ್ಯಕ್ರಮ ನಡೆಸಲಾಯಿತು.ಕಚೇರಿಯಲ್ಲಿ ಘನ ಹೋಮ, ಲಕ್ಷ್ಮೀ ಪೂಜೆ ಹಾಗೂ ಕಚೇರಿ ವಾಹನಗಳಿಗೆ ಪೂಜೆ ನೆರವೇರಿಸಲಾಗಿತ್ತು. ಸಿಬ್ಬಂದಿಗೆ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ವಿವಿಧ ಆಟೋಟ ಕಾರ್ಯಕ್ರಮಗಳನ್ನು ನಡೆದವು.ಪೂಜಾ ಕಾರ್ಯದಲ್ಲಿ ಜಿಲ್ಲಾ ನಿರ್ದೇಶಕ ವಿಠಲ್ ಸಾಲಿಯಾನ್, ಜನಜಾಗೃತಿ ಸದಸ್ಯ ಸುರೇಶ್, ಯೋಜನಾಧಿಕಾರಿ ಹನುಮಂತಪ್ಪ ಇದ್ದರು.