ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ. ಜಗದೀಶ ಎಚ್. ಜಿ. ಅವರು ಗ್ರಾಮೀಣ ಪ್ರದೇಶದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಜಿಲ್ಲಾಡಳಿತ ವತಿಯಿಂದ ಹಾಸನದಲ್ಲಿ ನಡೆದ ೭೭ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಿರಿಯ ಪ್ರಯೋಗಶಾಲಾ ತಂತ್ರಜ್ಞರಾಗಿದ್ದ ವಿ. ಗೋವಿಂದರಾಜು ಅವರ ಪುತ್ರ ಡಾ. ಜಗದೀಶ ಎಚ್.ಜಿ. ಅವರು ಅರಕಲಗೂಡು ತಾಲೂಕು ಹೆಬ್ಬಾಲೆ ಗ್ರಾಮದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದಲ್ಲಿ ಹಿರಿಯ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಪಟ್ಟಣದ ನಿವಾಸಿ ಹಾಗೂ ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ. ಜಗದೀಶ ಎಚ್. ಜಿ. ಅವರು ಗ್ರಾಮೀಣ ಪ್ರದೇಶದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಜಿಲ್ಲಾಡಳಿತ ವತಿಯಿಂದ ಹಾಸನದಲ್ಲಿ ನಡೆದ ೭೭ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಿರಿಯ ಪ್ರಯೋಗಶಾಲಾ ತಂತ್ರಜ್ಞರಾಗಿದ್ದ ವಿ. ಗೋವಿಂದರಾಜು ಅವರ ಪುತ್ರ ಡಾ. ಜಗದೀಶ ಎಚ್.ಜಿ. ಅವರು ಅರಕಲಗೂಡು ತಾಲೂಕು ಹೆಬ್ಬಾಲೆ ಗ್ರಾಮದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದಲ್ಲಿ ಹಿರಿಯ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಹಾಸನದ ಜಿಲ್ಲಾ ಹಾಕಿ ಕ್ರೀಡಾಂಗಣದಲ್ಲಿ ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ವತಿಯಿಂದ ಆಯೋಜಿಸಿದ್ದ, ೭೭ನೇ ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ, ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸಂಸದ ಶ್ರೇಯಸ್ ಎಂ ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಜಿಪಂ ಸಿಇಒ ಬಿ.ಆರ್‌. ಪೂರ್ಣಿಮ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶುಭನ್ವಿತ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎಚ್. ಬಿ. ಮದನಗೌಡ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜೆ.ಆರ್‌. ಕೆಂಚೇಗೌಡ ಸೇರಿದಂತೆ ಇನ್ನಿತರೆ ಗಣ್ಯರ ಉಪಸ್ಥಿತಿಯಲ್ಲಿ ಡಾ. ಜಗದೀಶ ಎಚ್.ಜಿ. ಅವರ ಆಯುಷ್ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಸನ್ಮಾನಿಸಿ ಅಭಿನಂದಿಸಲಾಯಿತು.