ಸಾರಾಂಶ
ಪ್ರಕೃತಿ ನೀಡಿದ ಅನೇಕ ಭಾಗ್ಯಗಳಲ್ಲಿ ಆರೋಗ್ಯ ಭಾಗ್ಯವೂ ಒಂದು. ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು ಎಂದು ಆರೋಗ್ಯ ಮಿತ್ರ ಕಾರ್ತಿಕಗೌಡ ಹೇಳಿದರು.
ಗುರುಮಠಕಲ್ : ಪ್ರಕೃತಿ ನೀಡಿದ ಅನೇಕ ಭಾಗ್ಯಗಳಲ್ಲಿ ಆರೋಗ್ಯ ಭಾಗ್ಯವೂ ಒಂದು. ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು ಎಂದು ಆರೋಗ್ಯ ಮಿತ್ರ ಕಾರ್ತಿಕಗೌಡ ಹೇಳಿದರು.
ಗುರುಮಠಕಲ್ ಪಟ್ಟಣದ ನಮ್ಮ ಕ್ಲಿನಿಕ್‌ನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿ, ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸೋಮವಾರದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಕಾರ್ಡ್ ಮಾಡಿಕೊಡಲಾಗುತ್ತದೆ.
ಬಿಪಿಎಲ್ ಕಾರ್ಡ್ ಹೊಂದಿದವರಿಗೆ 5 ಲಕ್ಷದವರೆಗೆ ಉಚಿತ ಶಸ್ತ್ರಚಿಕಿತ್ಸೆ ಹಾಗೂ ಎಪಿಎಲ್ ಕಾರ್ಡ್ ಇರುವ ಫಲಾನುಭವಿಗಳಿಗೆ 1.5 ಲಕ್ಷ ವರೆಗೆ ಶಸ್ತ್ರ ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ಈ ಆರೋಗ್ಯ ಯೋಜನೆಗಳ ಲಾಭ ಪಡೆದು ಉತ್ತಮ ಸಮಾಜ ನಿರ್ಮಾಣ ಮಾಡುವಂತೆ ಹೇಳಿದರು. ವೈದ್ಯಾಧಿಕಾರಿ ಡಾ. ಶಿವಪ್ರಸಾದ ಮೈತ್ರಿ, ಯೋಜನಾಧಿಕಾರಿ ಮಂಜುನಾಥ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಅಧಿಕಾರಿಗಳಾದ ಲಕ್ಷ್ಮೀ, ಆವಂತಿ, ನರಸಿಂಹಲು, ನಾರಾಯಣಮ್ಮ, ಉಮಾವತಿ ಆವಂತಿ , ಪರಿಮಳಾ, ಬಬಿತಾ, ವೆಂಕಟಮ್ಮ ಇದ್ದರು.