ಸಾರಾಂಶ
ಹೃದಯಾಘಾತದಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ.
ಹಾಸನ : ಹೃದಯಾಘಾತದಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪಾಪಣ್ಣ ಮತ್ತು ಗಾಯತ್ರಿ ದಂಪತಿಯ ಮಗಳಾದ ಕವನ.ಕೆ.ವಿ. (21) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿನಿ.
ನಗರದ ಎಂ.ಜಿ.ರಸ್ತೆಯಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ. ವಿದ್ಯಾರ್ಥಿನಿಯಾಗಿದ್ದ ಕವನ ಮೂರು ವಿಷಯಗಳ ಪರೀಕ್ಷೆ ಬರೆದಿದ್ದಳು. ಇನ್ನೂ ಮೂರು ಪರೀಕಷೆಗಳನ್ನು ಬರೆಯಬೇಕಿತ್ತು. ಶುಕ್ರವಾರ ನಾಲ್ಕನೇ ವಿಷಯದ ಪರೀಕ್ಷೆ ಬರೆಯಬೇಕಿತ್ತು.
ಮನೆಗೆ ನೀರು ತರುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾಳೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಕುಸಿದು ಬಿದ್ದ ಕವನಳನ್ನು ಕೂಡಲೇ ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಯಿತಾದರೂ ಅಷ್ಟರಲ್ಲಿ ಹೃದಯಾಘಾತದಿಂದ ಕವನ ಸಾವನ್ನಪ್ಪಿದ್ದಳು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))