ಸಾರಾಂಶ
ಕನ್ನಡಪ್ರಭ ವಾರ್ತೆ ಕೆಜಿಎಫ್ ಕೆಜಿಎಫ್ ನಗರಸಭೆ ವ್ಯಾಪ್ತಿಯಲ್ಲಿ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಖಾತಾ ಇಲ್ಲದ ಆಸ್ತಿ ಮಾಲೀಕರಿಗೆ ಬಿ-ಖಾತಾ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಅಕ್ರಮ ಆಸ್ತಿಗಳನ್ನು ಸಕ್ರಮಗೊಳಿಸಲು ಸರಕಾರ ಹಲವು ಷರತ್ತುಗಳನ್ನು ವಿಧಿಸಿ ಬಿ-ಖಾತಾ ನೀಡಲು ನಗರಸಭೆ ಪೌರಾಯುಕ್ತರಿಗೆ ಸರಕಾರ ಅದೇಶ ನೀಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಬಿ-ಖಾತಾ ಸಮಸ್ಯೆ ಬಗೆಹರಿಸಲು ಕಾಯ್ದೆಗೆ ಬದಲಾವಣೆ ಮಾಡಲಾಗಿದ್ದು, ಇದಕ್ಕೆ ತಕ್ಕಂತೆ ನಿಯಮಾವಳಿ ರೂಪಿಸಲಾಗಿದೆ. ಆಸ್ತಿ ತೆರಿಗೆ ಪರಿಷ್ಕರಿಸಿ ಅನಧಿಕೃತ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತಂದು ಪೌರ ಸಂಸ್ಥೆಗಳು ಸಶಕ್ತ ಆಗುತ್ತದೆ, ಇದರಿಂದ ನಗರ ಹಾಗೂ ಪಟ್ಟಣಗಳಿಗೆ ಮೂಲಸೌಕರ್ಯ ಒದಗಿಸಬಹುದಾಗಿದೆ.
ನಿಯಮಾವಳಿಗಳ ಪ್ರಕಾರ ಆಸ್ತಿಗಳ ಮೇಲಿನ ಆಸ್ತಿ ತೆರಿಗೆ, ಸೆಸ್ ದಂಡ ಪಾವತಿಸಿದ ಪಾವತಿಸದವರು, ಬಾಕಿದಾರ ಎಂದು ಪರಿಗಣಿಸಲ್ಪಡುತ್ತಾರೆ, ಅವರಿಗೆ ಶೋಕಾಸ್ ನೋಟೀಸ್ ನೀಡಿ ನಂತರ ಆಸ್ತಿಗಳ ಪರಿಶೀಲನೆ ನಡೆಸಲಾಗುವುದು. ನಗರಸಭೆ ವ್ಯಾಪ್ತಿಯಲ್ಲಿ ಪರವಾನಗಿ ಪಡೆದುಕೊಳ್ಳದೆ ಕಟ್ಟಡ ನಿರ್ಮಾಣ ಮಾಡಿರುವವರಿಗೆ ರಾಜ್ಯ ಸರಕಾರ ಶಾಕ್ ನೀಡಿದ್ದು, ಸ್ಥಳೀಯ ಸಂಸ್ಥೆಗಳಿಂದ ಅನುಮೋಧನೆ ಪಡೆದುಕೊಳ್ಳದೆ ಹಾಗೂ ನಿಯಮಗಳನ್ನು ಬೇಕಾಬಿಟ್ಟಿ ಉಲ್ಲಂಘನೆ ಮಾಡಿ ಕಟ್ಟಡಗಳನ್ನು ನಿರ್ಮಿಸಿರುವವರಿಗೆ ಬಿಸಿ ಮುಟ್ಟಿಸಲು ದುಪ್ಪಟ್ಟು ಶುಲ್ಕವನ್ನು ವಿಧಿಸುವುದರೊಂದಿಗೆ ಎ ಹಾಗೂ ಬಿ ಖಾತಾ ನೀಡಲು ಸರ್ಕಾರ ಮುಂದಾಗಿದೆ.ತೆರಿಗೆಯಲ್ಲಿನ ವ್ಯತ್ಯಾಸ ತಪ್ಪಿಸಲು ಕ್ರಮನಗರಸಭೆ ವ್ಯಾಪ್ತಿಯಲ್ಲಿ ಅಸ್ತಿಗಳಿಗೆ ಯಾವುದೇ ಖಾತಾ ಇಲ್ಲ, ನಗರದಲ್ಲಿ ಸಾವಿರಾರು ಅಸ್ತಿಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿವೆ, ಈ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರುವುದುಕ್ಕೆ ನಗರಸಭೆ ಭರ್ಜರಿ ಸಿದ್ದತೆ ಮಾಡಿಕೊಂಡಿದೆ.