ಆಲಂಬಾಡಿಕಾವಲು ಕೃಷಿ ಪತ್ತಿನ ಸಂಘಕ್ಕೆ ಬಿ.ಮೋಹನ್ ಅಧ್ಯಕ್ಷರಾಗಿ ಆಯ್ಕೆ

| Published : Mar 21 2025, 12:33 AM IST

ಸಾರಾಂಶ

ಕೆ.ಆರ್.ಪೇಟೆ ತಾಲೂಕಿನ ಆಲಂಬಾಡಿಕಾವಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ಬಿ.ಮೋಹನ್ ಅಧ್ಯಕ್ಷರಾಗಿ ಮತ್ತು ಜವರಮ್ಮ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ವಾಸಿಂ ಪಾಷ ಕಾರ್ಯನಿರ್ವಹಿಸಿದರು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ತಾಲೂಕಿನ ಆಲಂಬಾಡಿಕಾವಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ಬಿ.ಮೋಹನ್ ಅಧ್ಯಕ್ಷರಾಗಿ ಮತ್ತು ಜವರಮ್ಮ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ಬಿ.ಮೋಹನ್, ಉಪಾಧ್ಯಕ್ಷ ಸ್ಥಾನಕ್ಕೆ ಜವರಮ್ಮ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ವಾಸಿಂ ಪಾಷ ಕಾರ್ಯನಿರ್ವಹಿಸಿದರು.

ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಮಾತನಾಡಿ, ಕಾಂಗ್ರೆಸ್ ಬೆಂಬಲಿತ ಹಾಗೂ ಸ್ವಾಭಿಮಾನಿ ಬಳಗದ ಬಿ.ಮೋಹನ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಒಳ್ಳೆಯ ಬೆಳವಣಿಗೆ ಎಂದರು.

ನೂತ ಅಧ್ಯಕ್ಷ ಬಿ.ಮೋಹನ್ ಮತ್ತು ಉಪಾಧ್ಯಕ್ಷೆ ಜವರಮ್ಮ ಅವರು ಸಂಘದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಈ ಮೂಲಕ ಮತದಾರರು ನಮ್ಮ ಸ್ವಾಭಿಮಾನಿ ಬಳಗದ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನೂತನ ಅಧ್ಯಕ್ಷ ಬಿ.ಮೋಹನ್ ಮಾತನಾಡಿ, ಬಿ.ನಾಗೇಂದ್ರಕುಮಾರ್ ಹಾಗೂ ಎ.ಎಂ.ಸಂಜೀವಪ್ಪ ಎಲ್ಲಾ ನಿರ್ದೇಶಕರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಲು ಸಹಕಾರಿಯಾಯಿತು. ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ನೂತನ ಅಧ್ಯಕ್ಷರು- ಉಪಾಧ್ಯಕ್ಷರನ್ನು ನಿರ್ದೇಶಕರಾದ ಎ.ಟಿ.ಕರಿಶೆಟ್ಟಿ, ಗುಡುಗನಹಳ್ಳಿ ಸುದರ್ಶನ್, ರಾಜು ಎಸ್, ಕೃಷ್ಣಯ್ಯ, ಪಿ.ನಂಜುಂಡೇಗೌಡ, ಭಾಗ್ಯಮ್ಮ, ಗ್ರಾಪಂ ಅಧ್ಯಕ್ಷ ವೆಂಕಟೇಶ್, ತಾಪಂ ಮಾಜಿ ಸದಸ್ಯ ನಂಜುಂಡೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಕರಿಶೆಟ್ಟಿ ಇತರರು ಇದ್ದರು.

ನಾಳೆ ವಿದ್ಯುತ್ ವ್ಯತ್ಯಯ

ಮಂಡ್ಯ:

66/11 ಕೆ.ವಿ. ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಮಾ.22 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದರಿಂದ ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗಲಿದೆ. ನಗರ ಪ್ರದೇಶಗಳಾದ ಸುಭಾಷ್‌ನಗರ, ಆಶೋಕ ನಗರ, ವಿ.ವಿ. ರೋಡ್, ಹೊಸಹಳ್ಳಿ, ವಿನಾಯಕ ಬಡಾವಣೆ, ನೂರು ಅಡಿ ರೋಡ್, ನೆಹರು ನಗರ, ಹೊಸಹಳ್ಳಿ, ದ್ವಾರಕನಗರ, ಗಾಂಧಿನಗರ, ಎನ್‌ಜಿಓ ಲೇಔಟ್‌, ಶ್ರೀ ರಾಮ ನಗರ, ಕಾವೇರಿ ನಗರ 1- 2ನೇ ಹಂತ, ಚಂದ್ರ ದರ್ಶನ, ಚಾಮುಂಡೇಶ್ವರಿ ನಗರ, ಅನ್ನಪೂರ್ಣೇಶ್ವರಿ ನಗರ, ಶಂಕರನಗರ, ಇಂಡುವಾಳು, ಕಿರಗಂದೂರು, ಕಲ್ಲಹಳ್ಳಿ. ಕ್ಯಾತುಂಗೆರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಮಾಂತರ ಪ್ರದೇಶಗಳಾದ ಕಾರಸವಾಡಿ, ಮಂಗಲ, ಹನಿಯಂಬಾಡಿ, ಚೀರನಹಳ್ಳಿ, ಹೆಬ್ಬಕವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ.ಹುಲಿಕೆರೆ, ಬಿ.ಹುಲಿಕೆರೆ. ಮತ್ತು ಐ.ಪಿ ಮಾರ್ಗಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.