ಸಾರಾಂಶ
ಮುಗಳಖೋಡ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಟ್ಟಣದ ಬ.ನಿ. ಕುಲಿಗೋಡ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಉತ್ತಮ ಫಲಿತಾಂಶ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ 21 ಜನ ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ, 3 ಜನ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ವಾಣಿಜ್ಯ ವಿಭಾಗದಲ್ಲಿ 15 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ, 4 ವಿದ್ಯಾರ್ಥಿನಿಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಮುಗಳಖೋಡ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಟ್ಟಣದ ಬ.ನಿ. ಕುಲಿಗೋಡ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಉತ್ತಮ ಫಲಿತಾಂಶ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 21 ಜನ ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ, 3 ಜನ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ವಾಣಿಜ್ಯ ವಿಭಾಗದಲ್ಲಿ 15 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ, 4 ವಿದ್ಯಾರ್ಥಿನಿಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ 6 ವಿದ್ಯಾರ್ಥಿನಿಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.---ಕೋಟ್-----
ಗ್ರಾಮೀಣ ಭಾಗದ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಿರೀಕ್ಷೆಗೂ ಮೀರಿ ಸಾಧನೆ ಮಾಡಿರುವುದು ಸ್ವಾಗತಾರ್ಹ. ಅದರಲ್ಲೂ ವಿದ್ಯಾರ್ಥಿನಿಯರು ಅತ್ಯುತ್ತಮ ಅಂಕ ಗಳಿಸಿರುವುದು ವಿಶೇಷವಾಗಿದೆ. ಸಂಜಯ ಕುಲಿಗೋಡಅಧ್ಯಕ್ಷರು, ಬ.ನಿ. ಕುಲಿಗೋಡ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಮುಗಳಖೋಡ