ಕನ್ನಡಪ್ರಭ ವಾರ್ತೆ ಬಾಗಲಕೋಟೆಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಅವ್ಯವಹಾರ ಹಾಗೂ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ನೀಡಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಅವ್ಯವಹಾರ ಹಾಗೂ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ನೀಡಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಆಗ್ರಹಿಸಿದರು.ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಣ ದುರುಪಯೋಗ ಪ್ರಕರಣವು ಅತ್ಯಂತ ಗಂಭೀರವಾಗಿದ್ದು, ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕೆ ಮೀಸಲಿಟ್ಟ ಹಣ ದುರ್ಬಳಕೆಯಾಗಿದೆ ಕೂಡಲೇ ಬಿ.ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಈ ಪ್ರಕರಣದಲ್ಲಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಮತ್ತು ಸತ್ಯಾಸತ್ಯತೆ ಹೊರಬರಬೇಕಾದರೆ ಸಚಿವ ಬಿ.ನಾಗೇಂದ್ರ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸರ್ಕಾರವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮತ್ತು ಸಚಿವರ ರಾಜೀನಾಮೆ ಪಡೆಯದಿದ್ದರೆ ರಾಜ್ಯಾದ್ಯಂತ ತೀವ್ರ ಸ್ವರೂಪದ ಹೋರಾಟ ಹಾಗೂ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ತಿಳಿಸಿದರು.ಗೋಷ್ಠಿಯಲ್ಲಿ ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ರಾಜಶೇಖರ ಶೀಲವಂತ, ಲಕ್ಷ್ಮೀನಾರಾಯಣ ಕಾಸಟ್, ಸತ್ಯನಾರಾಯಣ ಹೇಮಾದ್ರಿ, ಶಿವಾನಂದ ಸುರಪುರ ಇದ್ದರು.