ಕರ್ನಾಟಕ ಸಂಘ ಮತ್ತು ಆರ್.ಕೆ.ಸಮೂಹ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಬಿ.ರಾಮಕೃಷ್ಣ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏ.೯ರಂದು ಬೆಳಗ್ಗೆ ೧೧ ಗಂಟೆಗೆ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಕರ್ನಾಟಕ ಸಂಘ ಮತ್ತು ಆರ್.ಕೆ.ಸಮೂಹ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಬಿ.ರಾಮಕೃಷ್ಣ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏ.೯ರಂದು ಬೆಳಗ್ಗೆ ೧೧ ಗಂಟೆಗೆ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ.ಜಯಪ್ರಕಾಶಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ರಾಮಕೃಷ್ಣ ಪ್ರಶಸ್ತಿಗೆ ತುಮಕೂರಿನ ಜಾನಪದ ವಿದ್ವಾಂಸ ಡಾ.ಚಿಕ್ಕಣ್ಣ ಯಣ್ಣೆಕಟ್ಟೆ ಹಾಗೂ ಕೊತ್ತತ್ತಿ ಗ್ರಾಮದ ವಿದ್ಯಾಗಣಪತಿ ಶಿಕ್ಷಣ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ ಎಂದರು.

ಕಾರ್ಯಕ್ರಮವನ್ನು ಮಾಜಿ ಶಾಸಕ ಎಂ.ಶ್ರೀನಿವಾಸ್ ಉದ್ಘಾಟಿಸುವರು. ಕರ್ನಾಟಕ ಸಂಘದ ಅಧ್ಯಕ್ಷ ಡಾ.ಜಯಪ್ರಕಾಶಗೌಡ ಅಧ್ಯಕ್ಷತೆ ವಹಿಸುವರು, ಅರಕಲಗೂಡಿನ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಪ್ರಶಸ್ತಿ ಪ್ರದಾನ ಮಾಡುವರು, ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಶುಭ ಹಾರೈಸುವರು, ವಿಶ್ರಾಂತ ಪ್ರಾಂಶುಪಾಲ ಡಾ.ಎಸ್.ಬಿ.ಶಂಕರಗೌಡ ಅಭಿನಂದನಾ ನುಡಿಗಳನ್ನಾಡುವರು. ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ರಾಮಕೃಷ್ಣ, ಪಿ.ಚಂದ್ರಕಲಾ ರಾಮಕೃಷ್ಣ ಗೌರವ ಉಪಸ್ಥಿತಿ ವಹಿಸುವರು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಶಿಕ್ಷಣ ಸಂಸ್ಥೆಯ ಆಳಿತಾಧಿಕಾರಿ ಎಂ.ಎಸ್.ಮರಿಸ್ವಾಮಿಗೌಡ, ಪ್ರಾಂಶುಪಾಲ ಡಾ.ಎಂ.ಸಿ.ಸತೀಶ್ಬಾಬು, ಸಂಘದ ನಿರ್ದೇಶಕ ಎಚ್.ಬಿ.ನಾಗಪ್ಪ ಇದ್ದರು.

ಏ.೭ರಂದು ಐದು ಕಿರು ಹೊತ್ತಿಗೆಗಳ ಬಿಡುಗಡೆ

ಕನ್ನಡಪ್ರಭ ವಾರ್ತೆ ಮಂಡ್ಯಜನಗಣ ಮುದ್ರಣ ಮತ್ತು ಪ್ರಕಾಶನ, ಮಂಡ್ಯ ಜಿಲ್ಲಾ ಜರ್ನಲಿಸ್ಟ್ ಕ್ಲಬ್‌ನ ಸಹಯೋಗದಲ್ಲಿ ಏ.೭ರಂದು ಜಿಲ್ಲೆಗೆ ಸಂಬಂಧಪಟ್ಟ ವಿವಿಧ ಕ್ಷೇತ್ರಗಳ ಐದು ಕಿರು ಹೊತ್ತಿಗೆಗಳ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಪತ್ರಕರ್ತ ಕೌಡ್ಲೆ ಚನ್ನಪ್ಪ ತಿಳಿಸಿದ್ದಾರೆ.

ನಗರದ ಕಲಾ ಮಂದಿರ ಪಕ್ಕದಲ್ಲಿರುವ ಎಚ್.ಹೊಂಬೇಗೌಡ ಕಾನೂನು ಕಾಲೇಜಿನಲ್ಲಿ ಅಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲೆಗೆ ಸಂಬಂಧಪಟ್ಟ ೫ ವಿವಿಧ ಕ್ಷೇತ್ರಗಳ ಐದು ಕಿರು ಹೊತ್ತಿಗೆಗಳ ಬಿಡುಗಡೆ ಸಮಾರಂಭವನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದು, ಚುಂಚಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು.ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆ ವಹಿಸಲಿದ್ದು, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಪಿ.ರವಿಕುಮಾರ್ ಗಣಿಗ, ಕೆ.ಎಂ.ಉದಯ್ ಅವರು ಒಂದೊಂದು ಕಿರು ಹೊತ್ತಿಗೆಗಳನ್ನು ಬಿಡುಗಡೆಗೊಳಿಸಲಿದ್ದಾರೆ.

ಜಿಲ್ಲೆಯಲ್ಲಿ ಹಾಲಿ ೨೦ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಿದ್ದಾರೆ. ಅವರು ಸಲ್ಲಿಸಿರುವ ಸಹಕಾರ ಕ್ಷೇತ್ರದ ಸೇವೆಯ ವಿವರಗಳು, ಜಿಲ್ಲೆಯ ಆಧುನಿಕ ಬೆಳೆಗಾರರು ಸಾಂಪ್ರದಾಯಿಕ ಬೆಳೆಗಳ ಜೊತೆಗೆ ಹೂವು-ಹಣ್ಣುಗಳನ್ನು ಬೆಳೆದು ತಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಿಕೊಂಡ ಆಧುನಿಕ ಬೆಳೆಗಳ ಹರಿಕಾರರು, ರಾಜಕೀಯ, ಸಾಮಾಜಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಿದ ಜಿ.ಮಾದೇಗೌಡರು ಈ ಪ್ರಾಂತ್ಯದ ಅಭಿವೃದ್ಧಿಗೆ ಹೇಗೆ ಕೆಲಸ ಮಾಡಿದರು ಎಂಬುದರ ಬಗ್ಗೆ ನಾ ಕಂಡಂತೆ ಜಿ.ಮಾದೇಗೌಡ, ಇವತ್ತಿನ ಸಕ್ಕರೆ ಕಾರ್ಖಾನೆಗಳ ಅಧೋಗತಿ ಹಾಗೂ ಸಹಕಾರ ಕ್ಷೇತ್ರದ ಸ್ಥಿತಿಗತಿ...ಈ ಕುರಿತು ಕಿರು ಹೊತ್ತಿಗೆಗಳನ್ನು ಹೊರತರಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನಾಳೆ ಭುವನ ವಿಶ್ವಕರ್ಮ ಸಮಾಜ ಕಚೇರಿ ಉದ್ಘಾಟನೆಮಂಡ್ಯ:

ಜಿಲ್ಲಾ ಭುವನ ವಿಶ್ವಕರ್ಮ ಸಮಾಜದ ವತಿಯಿಂದ ನಗರದ ಗಾಂಧಿಭವನದಲ್ಲಿ ಏ.6 ರಂದು ಬೆಳಗ್ಗೆ 9.30ಕ್ಕೆ ಸಮಾಜದ ಕಚೇರಿ ಉದ್ಘಾಟನೆ, ಜಿಲ್ಲಾ ಮತ್ತು ತಾಲೂಕು ಭುವನ ವಿಶ್ವಕರ್ಮ ಸಮಾಜದ ಪದಾಧಿಕಾರಿಗಳ ಪದಗ್ರಹಣ ಹಾಗೂ ಅಭಿನಂದನಾ ಸಮಾರಂಭ ನಡೆಯಲಿದೆ.ಸಮಾರಂಭವನ್ನು ಶಾಸಕ ಪಿ.ರವಿಕುಮಾರ್ ಉದ್ಘಾಟಿಸುವರು. ರಾಜ್ಯ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸುಜ್ಞಾನಮೂರ್ತಿ ಘನಉಪಸ್ಥಿತಿ ವಹಿಸುವರು. ಜಿಲ್ಲಾ ಭುವನ ವಿಶ್ವಕರ್ಮ ಸಮಾಜ ಅಧ್ಯಕ್ಷ ಎನ್.ಬಸವರಾಜು ಅಧ್ಯಕ್ಷತೆ ವಹಿಸುವರು. ಡೀಸಿ ಡಾ.ಕುಮಾರ, ಎಸ್ಪಿ ಶೋಭರಾಣಿ, ಎಡೀಸಿ ಶಿವಾನಂದಮೂರ್ತಿ, ಪೂರ್ವಠಾಣೆ ಆರಕ್ಷಕ ಉಪನಿರೀಕ್ಷಕ ಶೇಷಾದ್ರಿಕುಮಾರ್ ಸೇರಿದಂತೆ ಸಂಘದ ಗೌರವಾಧ್ಯಕ್ಷ ಬಿ.ವಿ.ಸೋಮು ಬೇವಿನಹಳ್ಳಿ, ಉಪಾಧ್ಯಕ್ಷ ಎಂ.ಎನ್.ಅನಿಲ್ ಕುಮಾರ್ ಮುಟ್ಟನಹಳ್ಳಿ, ಖಜಾಂಚಿ ಕೆ.ಸಿ.ಶ್ರೀನಿವಾಸ್ , ಸಂಘಟನಾ ಕಾರ್ಯದರ್ಶಿ ವಿ.ಸಿ.ಗೋವಿಂದರಾಜು, ಕಾರ್ಯದರ್ಶಿ ಎಂ.ಎಸ್.ಕಟ್ಟೆ ಕೃಷ್ಣಸ್ವಾಮಿ ಹಾಗೂ ನಿರ್ದೇಶಕರು ಭಾಗವಹಿಸುವರು.