ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬ: ಯುವಮೋರ್ಚಾ ಗೋದಾನ

| Published : Nov 06 2025, 02:45 AM IST

ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬ: ಯುವಮೋರ್ಚಾ ಗೋದಾನ
Share this Article
  • FB
  • TW
  • Linkdin
  • Email

ಸಾರಾಂಶ

ಬಿ.ವೈ. ವಿಜಯೇಂದ್ರ ಹುಟ್ಟುಹಬ್ಬದ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಬುಧವಾರ ಶ್ರೀ ಕೃಷ್ಣಮಠದಲ್ಲಿ ಬಡಕುಟುಂಬವೊಂದಕ್ಕೆ ಗೋದಾನ ಮಾಡಲಾಯಿತು.

ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹುಟ್ಟುಹಬ್ಬದ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಬುಧವಾರ ಶ್ರೀ ಕೃಷ್ಣಮಠದಲ್ಲಿ ಬಡಕುಟುಂಬವೊಂದಕ್ಕೆ ಗೋದಾನ ಮಾಡಲಾಯಿತು.ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಕಿರಿಯ ಪಟ್ಟ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಗೋವು ಮತ್ತು ಕರುವಿಗೆ ಬಾಳೆಹಣ್ಣು ಪ್ರಸಾದವನ್ನು ತಿನ್ನಿಸಿ ಬಡ ಗೋಪಾಲಕಿಗೆ ಹಸ್ತಾಂತರಿಸಿದರು.ನಂತರ ಪರ್ಯಾಯ ಶ್ರೀಪಾದರು, ಹುಟ್ಟುಹಬ್ಬದ ಸಂದರ್ಭದಲ್ಲಿ ಗೋದಾನ ಮಾಡುವುದು ಅತ್ಯಂತ ಔಚಿತ್ಯಪೂರ್ಣ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ, ರಾಘವೇಂದ್ರ ಅವರಿಗೆ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಅನುಗ್ರಹ ಸದಾ ಇರಲಿ ಎಂದು ಅನುಗ್ರಹಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಪೂರ್ಣ ಪ್ರಮಾಣದಲ್ಲಿ ಗೋಹತ್ಯೆ ನಿಷೇಧವಾಗುವಂತಾಗಲಿ ಎಂದು ಆಶಿಸಿದರು.ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರು, ಕಾಂಗ್ರೆಸ್ ಸರ್ಕಾರದ ಅಕ್ರಮಗಳನ್ನು ಎದುರಿಸುವಲ್ಲಿ ತಮ್ಮ ನಾಯಕ ಬಿ.ವೈ.ರಾಘವೇಂದ್ರ ಅವರಿಗೆ ಇನ್ನಷ್ಟು ಶಕ್ತಿ ಸಿಗಲಿ, ಅವರ ನೇತೃತ್ವದಲ್ಲಿ 2028ರಲ್ಲಿ ಬಿಜೆಪಿ ರಾಜ್ಯದಲ್ಲಿ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರಲಿ ಎಂಬ ಪ್ರಾರ್ಥನೆಯೊಂದಿಗೆ ಈ ಗೋದಾನ ಆಯೋಜಿಸಲಾಗಿದೆ ಎಂದರು.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪಕ್ಷದ ನಾಯಕರಾದ ಗೀತಾಂಜಲಿ ಸುವರ್ಣ, ಸಂಧ್ಯಾ ರಮೇಶ್, ರಾಜೇಶ್ ಕಾವೇರಿ, ವೀಣಾ ಎಸ್.ಶೆಟ್ಟಿ, ಶ್ರೀನಿಧಿ ಹೆಗ್ಡೆ, ಶಿವಕುಮಾರ್ ಅಂಬಲಪಾಡಿ, ಶ್ರೀಮಠದ ದಿವಾನ ನಾಗರಾಜ ಆಚಾರ್ಯ ಮುಂತಾವರಿದ್ದರು. ಶಶಾಂಕ್ ಶಿವತ್ತಾಯ ಕಾರ್ಯಕ್ರಮ ಸಂಯೋಜಿಸಿದರು.