ಡಾ.ಬಿ.ಆರ್.ಅಂಬೇಡ್ಕರ್ ರಚಿತ ಸಂವಿಧಾನ ಎಲ್ಲಾ ಜಾತಿ, ಧರ್ಮ ಹಾಗೂ ವರ್ಗಗಳಿಗೂ ಸಮಾನತೆಯನ್ನು ದೊರಕಿಸಿಕೊಟ್ಟಿದೆ. ದೇಶದ ಒಳಿತಿಗಾಗಿ ಶ್ರಮಿಸಿದ್ದವರಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಒಬ್ಬರು ಎಂದರೆ ತಪ್ಪಾಗಲಾರದು. ಅವರು ವಿದೇಶಗಳಿಗೆಲ್ಲ ತಿರುಗಿ ಮಾಹಿತಿ ಸಂಗ್ರಹಿಸಿ ಸಂವಿಧಾನ ರಚಿಸಿದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಎಲ್ಲರ ಧ್ವನಿಗೆ ಶಕ್ತಿಯಾಗಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬ ಪ್ರಜೆಗಳಿಗೂ ಸಮಾನತೆ ಕಲ್ಪಿಸಿದ್ದಾರೆ ಎಂದು ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹೇಳಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ರಚಿತ ಸಂವಿಧಾನ ಎಲ್ಲಾ ಜಾತಿ, ಧರ್ಮ ಹಾಗೂ ವರ್ಗಗಳಿಗೂ ಸಮಾನತೆಯನ್ನು ದೊರಕಿಸಿಕೊಟ್ಟಿದೆ. ದೇಶದ ಒಳಿತಿಗಾಗಿ ಶ್ರಮಿಸಿದ್ದವರಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಒಬ್ಬರು ಎಂದರೆ ತಪ್ಪಾಗಲಾರದು. ಅವರು ವಿದೇಶಗಳಿಗೆಲ್ಲ ತಿರುಗಿ ಮಾಹಿತಿ ಸಂಗ್ರಹಿಸಿ ಸಂವಿಧಾನ ರಚಿಸಿದರು. ಇಂತಹ ಮಹನೀಯರನ್ನು ವರ್ಷದಲ್ಲಿ ಒಂದು ದಿನ ಮಾತ್ರ ನೆನೆಯದೆ ಪ್ರತಿನಿತ್ಯ ಸ್ಮರಿಸಬೇಕು ಎಂದರು.

ಇದಕ್ಕೂ ಮುನ್ನ ಪಟ್ಟಣದ ಕುವೆಂಪು ವೃತ್ತದಿಂದ ಬೆಳ್ಳಿ ಸಾರೋಟಿನಲ್ಲಿ ಅಂಬೇಡ್ಕರ್ ಭಾವಚಿತ್ರವಿರಿಸಿ ಪಟ್ಟಣದ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಚನ್ನಪಟ್ಟಣದ ಶಿಕ್ಷಕ ಜಯರಾಮ್ ಎ.ಜಿ. ಅವರು ಅಂಬೇಡ್ಕರ್ ಜೀವನ ಚರಿತ್ರೆ ಕುರಿತ ಭಾಷಣ ಮಾಡಿದರು.

ಈ ವೇಳೆ ತಹಸೀಲ್ದಾರ್ ಚೇತನಾ ಯಾದವ್, ತಾಪಂ ಇಒ ಚಂದ್ರು, ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗಾಯಿತ್ರಿ ಕೆ.ಎಸ್, ಬಿಇಒ ನಂದೀಶ್, ಅಂಬೇಡ್ಕರ್ ಒಕ್ಕೂಟದ ಶಿವಯ್ಯ, ಕುಬೇರಪ್ಪ, ರವಿಚಂದ್ರ, ಚಂದ್ರಶೇಖರ್, ಮಹದೇವಸ್ವಾಮಿ ಮಹದೇವಪುರ, ಪಾಂಡು, ಕುಮಾರ್, ಮಹದೇವಸ್ವಾಮಿ ನಗುವನಹಳ್ಳಿ, ಕರವೇ ಶಂಕರ್, ಮಂಡ್ಯ ರಕ್ಷಣಾ ವೇದಿಕೆಯ ಶಂಕರ್‌ಬಾಬು, ಜಗದೀಶ್, ಶ್ರೀಕಂಠು ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇತರೆ ಸಂಘಟನೆ ಮುಖಂಡರು ಇತರರು ಹಾಜರಿದ್ದರು.