ದೊಡ್ಡಬಳ್ಳಾಪುರ: ದೇಶದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ 119ನೇ ಜನ್ಮದಿನಾಚರಣೆಯನ್ನು ಇಲ್ಲಿನ ತಾಲೂಕು ಆಡಳಿತ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಭಾನುವಾರ ಆಚರಿಸಲಾಯಿತು.
ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಡಾ.ಮಲ್ಲಪ್ಪ ಯರಗೋಳ, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಇಲ್ಲಿನ ಸಿದ್ದಲಿಂಗಯ್ಯ ವೃತ್ತದಲ್ಲಿರುವ ಡಾ.ಬಾಬು ಜಗಜೀವನರಾಮ್ ಅವರ ಪ್ರತಿಮೆಗೆ ಅನೇಕ ಜನಪ್ರತಿನಿಧಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಕನ್ನಡಪರ, ದಲಿತ ಸಂಘ-ಸಂಸ್ಥೆಗಳ ಮುಖಂಡರು, ರಾಜಕೀಯ ಪಕ್ಷಗಳ ಪ್ರಮುಖರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ಬಳಿಕ ಮಾತನಾಡಿದ ಮುಖಂಡರು, ಬಾಬು ಜಗಜೀವನ್ ರಾಂ ಅವರು ಶಿಕ್ಷಣಕ್ಕೆ ಒತ್ತು ನೀಡುವ ಜೊತೆಗೆ ಸಮಾಜದಲ್ಲಿನ ಅಸಮಾನತೆ, ಶೋಷಣೆಯ ವಿರುದ್ಧ ಹೋರಾಡಿರು. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವಲ್ಲಿ ಬಾಬು ಜಗಜೀವನ್ ರಾಂ ಪ್ರಮುಖ ಪಾತ್ರ ವಹಿಸಿದ್ದರು. ಶೋಷಿತ ಸಮುದಾಯವನ್ನು ಮುಖ್ಯ ವಾಹಿನಿಗೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಹಸಿರು ಕ್ರಾಂತಿಯ ಮೂಲಕ ದೇಶವನ್ನು ಹಸಿವು ಮುಕ್ತ ಮಾಡುವ ಪ್ರಯತ್ನಿಸಿದರು. ಸಮಾಜಕ್ಕೆ ಬಾಬು ಜಗಜೀವನ್ ರಾಂ ಕೊಡುಗೆ ಅಪಾರ ಎಂದರು.
5ಕೆಡಿಬಿಪಿ7- ದೊಡ್ಡಬಳ್ಳಾಪುರದಲ್ಲಿ ಡಾ.ಬಾಬು ಜಗಜೀವನರಾಮ್ ಜಯಂತಿ ಅಂಗವಾಗಿ ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಜಗಜೀವನರಾಮ್ ಪ್ರತಿಮೆಗೆ ಮಾಲಾರ್ಪಣೆ ನಡೆಯಿತು.