ಸಾರಾಂಶ
ಭಾರತದಲ್ಲಿ ದೀರ್ಘಕಾಲದಿಂದ ಬೆಳೆದು ಬಂದಿದ್ದ ಮೇಲು-ಕೀಳು ತಾರತಮ್ಯ, ಜಾತಿ ಪದ್ಧತಿ, ಅಸ್ಪರ್ಶತೆ ಎಂಬ ಮನೋಭಾವವನ್ನು ತೊಡೆದು ಹಾಕಲು ಜಗಜೀವನ್ ರಾಂ ಅವರು ಸಾಮಾಜಿಕ ನೆಲೆಗಟ್ಟಿನ ಮೇಲೆ ಹೋರಾಟ ನಡೆಸಿದ ಮಹಾನ್ ಸಾಧಕ.
ಕನ್ನಡಪ್ರಭ ವಾರ್ತೆ ಮದ್ದೂರು
ಬಾಬು ಜಗಜೀವನ್ ರಾಂ ಅವರು ಸ್ವಾತಂತ್ರ್ಯದ ಹೋರಾಟ, ಸಂವಿಧಾನದ ರಚನಾ ಸಭೆಯ ಸದಸ್ಯರಾಗಿ ದೇಶಕ್ಕೆ ಮಹತ್ವದ ಕೊಡುಗೆ ನೀಡಿದ ಮಹಾನ್ ನಾಯಕ ಎಂದು ತಹಸೀಲ್ದಾರ್ ಡಾ.ಸ್ಮಿತಾರಾಮು ಬಣ್ಣಿಸಿದರು.ಪಟ್ಟಣದ ಪುರಸಭೆ ಆವರಣದಲ್ಲಿ ತಾಲೂಕ ಆಡಳಿತ, ತಾಪಂ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ನಡೆದ ಡಾ. ಬಾಬು ಜಗಜೀವನ್ ರಾಂ ಅವರ 118ನೇ ಜನ್ಮದಿನಾಚರಣೆಯ ಉದ್ಘಾಟಿಸಿ ಅವರುಮಾತನಾಡಿದರು.
ಭಾರತದಲ್ಲಿ ದೀರ್ಘಕಾಲದಿಂದ ಬೆಳೆದು ಬಂದಿದ್ದ ಮೇಲು-ಕೀಳು ತಾರತಮ್ಯ, ಜಾತಿ ಪದ್ಧತಿ, ಅಸ್ಪರ್ಶತೆ ಎಂಬ ಮನೋಭಾವವನ್ನು ತೊಡೆದು ಹಾಕಲು ಜಗಜೀವನ್ ರಾಂ ಅವರು ಸಾಮಾಜಿಕ ನೆಲೆಗಟ್ಟಿನ ಮೇಲೆ ಹೋರಾಟ ನಡೆಸಿದ ಮಹಾನ್ ಸಾಧಕ ಎಂದರು. ಭಾರತೀ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ, ಬಿ.ಎಸ್. ಬೋರೇಗೌಡ ಉಪನ್ಯಾಸ ನೀಡಿದರು. ಪುರಸಭಾ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ ಟಿ.ಆರ್. ಪ್ರಸನ್ನ ಕುಮಾರ್, ಸ್ಥಾಯಿಸಮಿತಿ ಅಧ್ಯಕ್ಷ ವನಿತಾ, ತಾಪಂ ಇಒ ರಾಮಲಿಂಗಯ್ಯ, ಬಿಇಒ ದೇವರಾಜು, ಪುರಸಭೆ ಮುಖ್ಯ ಅಧಿಕಾರಿ ಮೀನಾಕ್ಷಿ, ಸರ್ಕಲ್ ಇನ್ಸ್ ಪೆಕ್ಟರ್ ವೆಂಕಟೇಗೌಡ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಲ್. ನಾಗರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಶ್ರೀ ನರಸಿಂಹಸ್ವಾಮಿ ದೇವಾಲಯದ ಆವರಣದಿಂದ ಪುರಸಭಾ ಕಚೇರಿ ವರೆಗೆ ಜಾನಪದ ಕಲಾತಂಡದ ಮೆರವಣಿಗೆಯೊಂದಿಗೆ ಬಾಬು ಜಗಜೀವನ್ ರಾಮ್ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.