ಆದರ್ಶ ಸಮಾಜಕ್ಕೆ ಬಾಬು ಜಗಜೀವನ್‌ ರಾಮ್‌ ಚಿಂತನೆಗಳು ದಾರಿದೀಪ: ವಿ.ಸೋಮಣ್ಣ

| Published : Apr 06 2024, 12:46 AM IST

ಆದರ್ಶ ಸಮಾಜಕ್ಕೆ ಬಾಬು ಜಗಜೀವನ್‌ ರಾಮ್‌ ಚಿಂತನೆಗಳು ದಾರಿದೀಪ: ವಿ.ಸೋಮಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಬಾಬು ಜಗಜೀವನರಾಂ ಅವರು ಈ ದೇಶಕ್ಕೆ ಕೊಟ್ಟ ಕೊಡುಗೆ, ನೀಡಿದ ಸಂದೇಶ ಸರ್ವಕಾಲಕ್ಕೂ ಸಲ್ಲುವಂತಾದ್ದು, ಎಲ್ಲಾ ವರ್ಗದವರನ್ನು ಸಮಾನವಾಗಿ ತೆಗೆದುಕೊಂಡು ಹೋಗಬೇಕು ಎಂಬ ಅವರ ಚಿಂತನೆ ಭಾವೈಕ್ಯ ಭಾರತಕ್ಕೆ ಶಕ್ತಿ ತುಂಬಿದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರುಬಾಬು ಜಗಜೀವನರಾಂ ಅವರು ಈ ದೇಶಕ್ಕೆ ಕೊಟ್ಟ ಕೊಡುಗೆ, ನೀಡಿದ ಸಂದೇಶ ಸರ್ವಕಾಲಕ್ಕೂ ಸಲ್ಲುವಂತಾದ್ದು, ಎಲ್ಲಾ ವರ್ಗದವರನ್ನು ಸಮಾನವಾಗಿ ತೆಗೆದುಕೊಂಡು ಹೋಗಬೇಕು ಎಂಬ ಅವರ ಚಿಂತನೆ ಭಾವೈಕ್ಯ ಭಾರತಕ್ಕೆ ಶಕ್ತಿ ತುಂಬಿದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.ಶುಕ್ರವಾರ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಬಾಬುಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಬಾಬೂಜಿ ಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಸೋಮಣ್ಣ, ಸಮಾಜಕ್ಕೆ ಕೊಡುಗೆ ಕೊಟ್ಟ ಬಾಬು ಜಗಜೀವನರಾಂ ಅವರಂತಹ ಮಹನೀಯರು ಅಮರರಾಗುತ್ತಾರೆ, ಅವರ ತತ್ವಾದರ್ಶಗಳು, ಚಿಂತನೆಗಳ ಮೂಲಕ ಅವರು ಸದಾ ನಮ್ಮೊಂದಿಗಿರುತ್ತಾರೆ ಎಂದರು.ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಅನೇಕ ಮಹನೀಯರು ಈ ದೇಶಕ್ಕೆ ದೊಡ್ಡ ಕೊಡುಗೆ ನೀಡಿ ತಾವೇ ದೇಶದ ಆಸ್ತಿಯಾಗಿದ್ದಾರೆ. ಅಂತಹವರಲ್ಲಿ ಬಾಬು ಜಗಜೀವನರಾಂಅವರು ಶ್ರೇಷ್ಠ ಸ್ಥಾನದಲ್ಲಿದ್ದಾರೆ.ಇವರ ಆದರ್ಶಗಳನ್ನು ಪಾಲನೆ ಮಾಡುತ್ತಾ, ಇವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿದರೆ ಮಾದರಿ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಜಿಲ್ಲಾಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಮುಖಂಡರಾದ ಎಸ್. ಶಿವಪ್ರಸಾದ್, ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಆಂಜನಪ್ಪ, ರಾಜ್ಯ ಬಿಜೆಪಿ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ಓಂಕಾರ್, ಬಿ.ಪಿ.ಅಂಜನಮೂರ್ತಿ, ರಮೇಶ್, ಪಾಪಣ್ಣ ಮೊದಲಾದವರು ಭಾಗವಹಿಸಿದ್ದರು.