ಸಾರಾಂಶ
ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನ್ ರಾಮ್ ರವರು ಈ ದೇಶ ಕಂಡ ಅತ್ಯುತ್ತಮ ನಾಯಕರಾಗಿದ್ದು, ಅವರ ತತ್ವ, ಸಿದ್ಧಾಂತಗಳನ್ನು ಎಲ್ಲರೂ ಗೌರವಿಸಿ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವರಾಮ್ ಹೇಳಿದರು. ಹೋಬಳಿ ಕೇಂದ್ರದ ಗ್ರಾಮ ಪಂಚಾಯತಿ ವತಿಯಿಂದ ಮಾಜಿ ಉಪಪ್ರಧಾನಿ, ರಾಷ್ಟ್ರನಾಯಕ ಡಾ. ಬಾಬು ಜಗಜೀವನ್ ರಾಮ್ ಅವರ 118ನೇ ಜನ್ಮ ದಿನವನ್ನು ಆಚರಿಸಲಾಯಿತು. ಬಾಬೂಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಪೂಜೆ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ
ಹೋಬಳಿ ಕೇಂದ್ರದ ಗ್ರಾಮ ಪಂಚಾಯತಿ ವತಿಯಿಂದ ಮಾಜಿ ಉಪಪ್ರಧಾನಿ, ರಾಷ್ಟ್ರನಾಯಕ ಡಾ. ಬಾಬು ಜಗಜೀವನ್ ರಾಮ್ ಅವರ 118ನೇ ಜನ್ಮ ದಿನವನ್ನು ಆಚರಿಸಲಾಯಿತು. ಬಾಬೂಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಪೂಜೆ ಸಲ್ಲಿಸಲಾಯಿತು.ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವರಾಮ್ ಮಾತನಾಡಿ, ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನ್ ರಾಮ್ ರವರು ಈ ದೇಶ ಕಂಡ ಅತ್ಯುತ್ತಮ ನಾಯಕರಾಗಿದ್ದು, ಅವರ ತತ್ವ, ಸಿದ್ಧಾಂತಗಳನ್ನು ಎಲ್ಲರೂ ಗೌರವಿಸಿ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಗೌಡಕಿ ಮಂಜು, ಹೊನ್ನೇಗೌಡ, ಎನ್ ಎಸ್ ಮಂಜುನಾಥ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಭವಾನಿ, ಸಹಕಾರ್ಯದರ್ಶಿ ರಾಜಕುಮಾರ್, ಬಿಲ್ ಕಲೆಕ್ಟರ್ ನಾಗರಾಜು, ಸೋಮು, ವಾಟರ್ ಮ್ಯಾನ್ ರಾಜಣ್ಣ, ಮಾಸ್ತಿಗೌಡ, ನಿಂಗರಾಜು, ಧರಣಿ ಕುಮಾರ್, ಸೇರಿದಂತೆ ಇತರರು ಹಾಜರಿದ್ದರು.