ಸಾರಾಂಶ
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ ೧೧೮ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಬಾಬೂಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ೧೧೮ನೇ ಜನ್ಮದಿನ ಆಚರಿಸಲಾಯಿತು. ಡಾ.ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಬಾಬೂಜಿ ನೆಹರೂ ಸಂಪುಟದಲ್ಲಿ ಕೃಷಿ ಸಚಿವರಾಗಿದ್ದಾಗ ಕೃಷಿಗೆ ಹೆಚ್ಚು ಒತ್ತು ನೀಡಿ, ಹಸಿರು ಕ್ರಾಂತಿ ಮಾಡಿ ದೇಶದ ಆಹಾರ ಕೊರತೆ ನೀಗಿಸಿದರು. ೫೦ ವರ್ಷಗಳ ಕಾಲ ಸುದೀರ್ಘ ಆಡಳಿತ ನಡೆಸಿದರು ಎಂದು ಬಣ್ಣಿಸಿದರು.ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಬಾಬುಜಗಜೀವನ್ ರಾಂ ಅವರು ಕೃಷಿ, ಕಾರ್ಮಿಕ, ರಕ್ಷಣಾಖಾತೆ, ಸಂಪರ್ಕ ಸಚಿವರು, ಉಪಪ್ರಧಾನಿಯೂ ಆಗಿ ದೇಶದ ಅಭಿವೃದ್ದಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಚುಡಾಧ್ಯಕ್ಷ ಮಹಮದ್ ಅಸ್ಗರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಪಂಚಗ್ಯಾರಂಟಿ ಯೋಜನೆ ಅನುಷ್ಠಾನಸಮಿತಿ ತಾಲೂಕು ಅಧ್ಯಕ್ಷ ನಲ್ಲೂರು ಸೋಮೇಶ್ವರ್, ಗಾಪಂ ಅಧ್ಯಕ್ಷ ರೂಪೇಶ್, ಎಪಿಎಂಸಿ ಅಧ್ಯಕ್ಷ ಮಹದೇವಸ್ವಾಮಿ, ಸದಸ್ಯ ಎ,ಎಸ್.ಪ್ರದೀಪ್. ನಗರಸಭೆ ನಾಮನಿರ್ದೇಶಿತ ಸದಸ್ಯ ಸ್ವಾಮಿ, ಚುಡಾಸದಸ್ಯ ಪುಟ್ಟಸ್ವಾಮಿ, ಎಸ್ಸಿಮೋರ್ಚಾ ಗ್ರಾಮಾಂತರ ಅಧ್ಯಕ್ಷ ಸೋಮಣ್ಣ, ಅರಕಲವಾಡಿ ಗ್ರಾಪಂ ಮಾಜಿಅಧ್ಯಕ್ಷ ಮಹದೇವಯ್ಯ, ರಾಮಸಮುದ್ರ ಶಿವಮೂರ್ತಿ, ಶಿವಕುಮಾರ್, ಆರ್.ಕೆ.ಶಿವಕುಮಾರ್, ಜವರಯ್ಯ, ರಮೇಶ್, ಕುಮಾರ್, ಸುಬ್ಬಣ್ಣ, ನವೀನ್, ಜಿ.ಡಿ, ಪ್ರಕಾಶ್, ಯುವ ಕಾಂಗ್ರೆಸ್ ಅಧ್ಯಕ್ಷ ಅಕ್ಷಯ್, ಶ್ರೀನಿವಾಸ್, ಮರಿಯಾಲಹುಂಡಿ ಕುಮಾರ್, ಪಕ್ಷದ ಕಾರ್ಯಕರ್ತರು, ಮುಖಂಡರು ಹಾಜರಿದ್ದರು.