ಕನ್ನಡಪ್ರಭ ವಾರ್ತೆ, ತುಮಕೂರು

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಂ ಅವರ ಜನ್ಮಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ನಿಂಗರಾಜು ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.ಹಸಿರು ಕ್ರಾಂತಿಯ ಹರಿಕಾರ,ಭಾರತ ಸರಕಾರದ ಮಾಜಿ ಕಾರ್ಮಿಕ, ರಕ್ಷಣಾ ಮಂತ್ರಿ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಸ್.ಷಫಿ ಅಹಮದ್, ಸಂವಿಧಾನದ ಸಮರ್ಪಕ ಜಾರಿಯ ಮೂಲಕ ಸಮಾನತೆ, ಜಾತಿ ಮುಕ್ತ ಸಮಾಜ ನಿರ್ಮಾಣದ ಕನಸು ಕಂಡವರು ಬಾಬೂಜಿ ಎಂದರು.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಕ್ಬಾಲ್ ಮಾತನಾಡಿ, ನೆಹರು ಸೇರಿದಂತೆ ಹಲವು ಪ್ರಧಾನಿಗಳ ಸಂಪುಟದಲ್ಲಿ 35 ವರ್ಷಗಳಿಗೂ ಹೆಚ್ಚು ಕಾಲ ಕ್ಯಾಬಿನೆಟ್ ಸಚಿವರಾಗಿ ಕೆಲಸ ಮಾಡಿದ್ದ ಬಾಬೂಜಿ, ಅವರ ಅಪಾರ ಅನುಭವವನ್ನು ಧಾರೆ ಎರೆದು ಈ ದೇಶ ಆಹಾರ ಸ್ವಾವಲಂಬನೆ, ರಕ್ಷಣೆಗೆ ತನ್ನದೇ ಆದ ಕೊಡುಗೆ ನೀಡಿದ್ದಾರೆ ಎಂದರು.ಈಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಸೈಯದ್ ದಾದಾಪೀರ್ ಮಾತನಾಡಿ, ಬಾಬು ಜಗಜೀವನ್ ರಾಂ ಅವರು ಕಾರ್ಮಿಕ ಮಂತ್ರಿಯಾಗಿ ಈ ದೇಶದಲ್ಲಿ ಕನಿಷ್ಠ ವೇತನ ಜಾರಿಗೆ ತಂದು,ಕಾರ್ಮಿಕರು ಘನತೆಯ ಬದುಕಿಗೆ ನಾಂದಿ ಹಾಡಿದರು.ಅಂಬೇಡ್ಕರ್ ಅವರು ಕಾರ್ಮಿಕ ಸಚಿವರಾಗಿದ್ದ ತಂದ ಹೊಸ ಕಾಯ್ದೆಗಳನ್ನು ತಮ್ಮ ಕಾಲದಲ್ಲಿ ಪರಿಪೂರ್ಣವಾಗಿ ಜಾರಿಗೊಳಿಸುವ ಮೂಲಕ ದೇಶದ ಕೈಗಾರಿಕೆಗಳು ಬೆಳೆಯಲು ನೇರವಾದ ಕೊಡುಗೆ ನೀಡಿದ್ದಾರೆ. ಕಾರ್ಮಿಕ ವಿಭಾಗ ಜಿಲ್ಲೆಯಲ್ಲಿ ಮತ್ತಷ್ಟು ಸಶಕ್ತವಾಗಿ ಕೆಲಸ ಮಾಡಲಿದೆ ಎಂದರು.ಹಿರಿಯ ಮುಖಂಡರಾದ ರೇವಣ್ಣ ಸಿದ್ದಯ್ಯ ಮಾತನಾಡಿದರು. ‌ಅಧ್ಯಕ್ಷತೆಯನ್ನು‌ ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ನಿಂಗರಾಜು ವಹಿಸಿದ್ದರು.ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಉಪಾಧ್ಯಕ್ಷರಾದ ಸಿದ್ದಾಪುರ ರಂಗಸ್ವಾಮಯ್ಯ, ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ನಿಂಗರಾಜು, ವಾಲೆಚಂದ್ರು, ಕಾನೂನು ಘಟಕದ ಅಧ್ಯಕ್ಷ ಸುರೇಶಕುಮಾರ್, ಎಸ್ಟಿ ಘಟಕದ ಕುಮಾರಸ್ವಾಮಿ, ಒಬಿಸಿ ಘಟಕದ ಅನಿಲ್‌ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪಂಚಾಕ್ಷರಯ್ಯ, ಶಿವಾಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್, ಮುಖಂಡರಾದ ಸಿಮೆಂಟ್ ಮಂಜುನಾಥ್, ಅಂಬರೀಷ್, ವೈ.ಎನ್.ನಾಗರಾಜು, ನಟರಾಜ ಶೆಟ್ಟಿ, ಕೈದಾಳ ರಮೇಶ್, ಸೇವಾದಳದ ಭೈಲಸ್ವಾಮಿ,ಲಕ್ಷ್ಮಣ್, ಹರೀಶ್, ಮಂಜುನಾಥ್, ನಯಾಜ್ ಅಹಮದ್ ಮತ್ತಿತರರು ಪಾಲ್ಗೊಂಡಿದ್ದರು. ಸಲಾಯಿತು.