ಹೊಸಕೋಟೆ: ಹೊಸಕೋಟೆ ತಾಲೂಕಿನಲ್ಲಿ ಮಾಜಿ ಸಚಿವ ಹಾಗೂ ಮಾಜಿ ಸಂಸದ ಬಿ.ಎನ್.ಬಚ್ಚೇಗೌಡರ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು
ಹೊಸಕೋಟೆ: ಹೊಸಕೋಟೆ ತಾಲೂಕಿನಲ್ಲಿ ಮಾಜಿ ಸಚಿವ ಹಾಗೂ ಮಾಜಿ ಸಂಸದ ಬಿ.ಎನ್.ಬಚ್ಚೇಗೌಡರ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ನಗರದಲ್ಲಿರುವ ಮಿಷನ್ ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ, ಎಂವಿಜೆ ಆಸ್ಪತ್ರೆ ಸೇರಿದಂತೆ ತಾಲೂಕಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಣ್ಣು ಬೆಂಡಿಗಾನಹಳ್ಳಿ ದೇವರಾಜ್ ಹಾಗೂ ತಾಪಂ ಮಾಜಿ ಅಧ್ಯಕ್ಷ ಡಿ.ಟಿ.ವೆಂಕಟೇಶ್ ನೇತೃತ್ವದಲ್ಲಿ ವಿತರಿಸಲಾಯಿತು. ಮಧ್ಯಾಹ್ನ ತಾಲೂಕು ಕಚೇರಿ ಆವರಣದಲ್ಲಿ ನಾಗರಿಕರಿಗೆ ಅನ್ನದಾಸೋಹ ಮಾಡಲಾಯಿತು.ಬಿಎಂಆರ್‌ಡಿಎ ಸದಸ್ಯ ಡಾ.ಎಚ್.ಎಂ.ಸುಬ್ಬರಾಜು ಮಾತನಾಡಿ, ಬಚ್ಚೇಗೌಡರು ಹಳ್ಳಿಯಿಂದ ದೆಹಲಿವರೆಗೆ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ನಾಯಕರು. ರಾಜ್ಯದಲ್ಲಿ ವಿವಿಧ ಖಾತೆಗಳ ಸಚಿವರಾಗಿ ಹಾಗೂ ಕೇಂದ್ರದಲ್ಲಿ ಸಂಸದರಾಗಿ ಸೇವೆ ಸಲ್ಲಿಸಿರುವ ಅವರು, ಕ್ಷೇತ್ರದ ಅಭಿವೃದ್ಧಿಗೆ ಹಲವು ಶಾಶ್ವತ ಕೊಡುಗೆಗಳನ್ನು ನೀಡಿದ್ದಾರೆ. ಇದಲ್ಲದೆ, ಆಸ್ಪತ್ರೆಗಳು, ವೃದ್ಧಾಶ್ರಮಗಳು ಹಾಗೂ ವಿವಿಧ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ರೋಗಿಗಳು, ವೃದ್ಧರು ಮತ್ತು ಸಾರ್ವಜನಿಕರಿಗೆ ಆಹಾರ ಪದಾರ್ಥ ವಿತರಿಸಿ ಅವರ ಹುಟ್ಟುಹಬ್ಬ ಆಚರಿಸಲಾಗಿದೆ ಎಂದರು.
ತಾಪಂ ಮಾಜಿ ಅಧ್ಯಕ್ಷ ಡಾ. ಡಿ.ಟಿ.ವೆಂಕಟೇಶ್ ಮಾತನಾಡಿ, ಬಿ.ಎನ್.ಬಚ್ಚೇಗೌಡರು 1977ರಲ್ಲಿ ವಕೀಲ ವೃತ್ತಿಯಿಂದ ಸಾರ್ವಜನಿಕ ಜೀವನಕ್ಕೆ ಪ್ರವೇಶಿಸಿ, ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡರು. ಬಚ್ಚೇಗೌಡರು ಸೇರಿದಂತೆ ಅವರ ಕುಟುಂಬ ಹಲವು ದಶಕಗಳಿಂದ ರಾಜಕೀಯ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ ಎಂದು ಸ್ಮರಿಸಿದರು.ಈ ವೇಳೆ ಟೌನ್ ಕಾಂಗ್ರೆಸ್ ಅಧ್ಯಕ್ಷ ಬಿವಿ.ಭೈರೇಗೌಡ, ಉದ್ಯಮಿಗಳಾದ ವಿ.ವಿ.ಸದಾನಂದ, ಸುಭಾಷ್‌ಗೌಡ, ಲಕ್ಷ್ಮಣ್ ಇತರರು ಹಾಜರಿದ್ದರು.
ಫೋಟೋ: 1 ಹೆಚ್‌ಎಸ್‌ಕೆ 2 ಮತ್ತು 3ಹೊಸಕೋಟೆ ತಾಲೂಕು ಕಚೇರಿ ಆವರಣದಲ್ಲಿ ಮಾಜಿ ಸಂಸದ ಬಚ್ಚೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ತಾಲೂಕು ಕಚೇರಿ ಆವರಣದಲ್ಲಿ ನಾಗರಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು.