ತರಗತಿಯಲ್ಲಿ ‌ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಕಲಿಕೆಗೆ ಪ್ರೇರಣೆ ನೀಡಬೇಕು: ಪ್ರಕಾಶ್‌

| Published : Feb 21 2025, 12:45 AM IST

ತರಗತಿಯಲ್ಲಿ ‌ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಕಲಿಕೆಗೆ ಪ್ರೇರಣೆ ನೀಡಬೇಕು: ಪ್ರಕಾಶ್‌
Share this Article
  • FB
  • TW
  • Linkdin
  • Email

ಸಾರಾಂಶ

ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕಾದರೆ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳು ಸಹ ನಿರೀಕ್ಷಿತ ಕಲಿಕಾ ಫಲಗಳನ್ನು ಸಾಧಿಸಬೇಕು. ಚಟುವಟಿಕಾಯುಕ್ತವಾದ ಸಂತಸದಾಯಕ ಕಲಿಕೆಗೆ ಪ್ರೇರಣೆ ನೀಡುವ ಕಲಿಕಾ ಹಬ್ಬ ಮೂಲ ಕಲಿಕಾ ಕೌಶಲಗಳನ್ನು ಬೆಳೆಸಲು ಸಹಕಾರಿ.

ಕನ್ನಡಪ್ರಭ ವಾರ್ತೆ ಮೈಸೂರು

ತರಗತಿಯಲ್ಲಿ ಹಿಂದುಳಿದ ಮಕ್ಕಳಿಗೆ ವೈವಿಧ್ಯಮಯವಾದ ವಿನೂತನ ಚಟುವಟಿಕೆಗಳ ಮೂಲಕ ಗುಣಮಟ್ಟದ ಕಲಿಕೆಗೆ ಪ್ರೇರಣೆ ನೀಡಬೇಕು ಎಂದು ಮೈಸೂರು ಗ್ರಾಮಾಂತರ ವಲಯದ ಕ್ಷೇತ್ರಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಶಿಕ್ಷಕರಿಗೆ ಕರೆ ನೀಡಿದರು.

ತಾಲೂಕಿನ ಮೆಲ್ಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ನಡೆದ ಮೆಲ್ಲಹಳ್ಳಿ ವಲಯ ಮಟ್ಟದ ಎಫ್.ಎಲ್.ಎನ್. ಕಲಿಕಾ ಹಬ್ಬದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕಾದರೆ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳು ಸಹ ನಿರೀಕ್ಷಿತ ಕಲಿಕಾ ಫಲಗಳನ್ನು ಸಾಧಿಸಬೇಕು. ಚಟುವಟಿಕಾಯುಕ್ತವಾದ ಸಂತಸದಾಯಕ ಕಲಿಕೆಗೆ ಪ್ರೇರಣೆ ನೀಡುವ ಕಲಿಕಾ ಹಬ್ಬ ಮೂಲ ಕಲಿಕಾ ಕೌಶಲಗಳನ್ನು ಬೆಳೆಸಲು ಸಹಕಾರಿ ಎಂದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ನಿರ್ದೇಶಕ ಟಿ. ಸತೀಶ್ ಜವರೇಗೌಡ ಮಾತನಾಡಿ ಶಿಕ್ಷಕರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾತ್ರ ಆದ್ಯತೆ, ಮನ್ನಣೆ, ಒತ್ತು ನೀಡಬಾರದು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳತ್ತಲೂ ಕಾಳಜಿ ವಹಿಸಬೇಕು. ನಿಧಾನ ಕಲಿಕೆಯ ಮಕ್ಕಳಿಗೆ ಸಹ ಪಠ್ಯಗಳಲ್ಲಿ ಹೆಚ್ಚಿನ ಅವಕಾಶ ಲಭಿಸುವಂತೆ ಮಾಡಬೇಕು ಎಂದರು.

ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಚಪ್ಪ ವಹಿಸಿದ್ದರು. ಸಿ.ಆರ್.ಪಿ. ದೀಪು, ತಾಲೂಕು ಶಿಕ್ಷಕರ ಸಂಘದ ಹೋಬಳಿ ಕಾರ್ಯದರ್ಶಿ ಕುಮಾರ್, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರಾದ ಪಿ.ಎನ್. ವೀಣಾ, ಎನ್. ಅನುಪಮ, ಎಂ. ಪ್ರಭುಸ್ವಾಮಿ, ಸಂತೋಷ್ ಬಿ. ಶೆಟ್ಟಿ, ಸಂಪನ್ಮೂಲ ಶಿಕ್ಷಕರಾದ ಎಚ್.ಎಸ್. ಸುನಿಲ್ ಕುಮಾರ್ ಹಾಗೂ ರಂಗಸ್ವಾಮಿ ಇದ್ದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ನಿರ್ದೇಶಕರಾದ ಮಾಲಂಗಿ ಸುರೇಶ್ ಹಾಗೂ ಮಹದೇವ್ ಅವರನ್ನು ಅಭಿನಂದಿಸಲಾಯಿತು.

ಕಲಿಕಾ ಹಬ್ಬದಲ್ಲಿ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ಕುರಿತು ಏಳು ಕಲಿಕಾ ಮೂಲೆಗಳಲ್ಲಿ ವಿವಿಧ ಚಟುವಟಿಕೆಗಳು ಜರುಗಿದವು. ವಿವಿಧ ಶಾಲೆಗಳ ನೂರಕ್ಕೂ ಅಧಿಕ ಮಕ್ಕಳಿಗೆ ಪ್ರಶಂಸಾ ಪತ್ರ ಮತ್ತು ಪುಸ್ತಕ ಬಹುಮಾನ ವಿತರಣೆ ಮಾಡಿ ಪ್ರೋತ್ಸಾಹಿಸಲಾಯಿತು.