ಬಡಗುಬೆಟ್ಟು ಸೊಸೈಟಿ: ಸಮುಜಮುಖಿ ಕಾರ್ಯಗಳಿಗೆ ಪ್ರತಿ ವರ್ಷ 25 ಲಕ್ಷ ರು. ಮೀಸಲು

| Published : Jul 09 2025, 12:19 AM IST

ಸಾರಾಂಶ

ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಅಜ್ಜರಕಾಡು ಪುರಭವನದಲ್ಲಿ ಉಡುಪಿ ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಸುಮಾರು 15 ಲಕ್ಷ ರು. ಮೊತ್ತದ ಉಚಿತ ನೋಟ್ ಪುಸ್ತಕ ಮತ್ತು ಶೈಕ್ಷಣಿಕ ಪರಿಕರಗಳ ವಿತರಣೆ ಇತ್ತೀಚೆಗೆ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗಳಿಸಿದ ಲಾಭಾಂಶದಲ್ಲಿ ಸಮಾಜಮುಖಿ ಯೋಜನೆಗಳಿಗೆ ಪ್ರತಿ ವರ್ಷ 25 ಲಕ್ಷ ರು. ವಿನಿಯೋಗಿಸುತ್ತಿದೆ ಎಂದು ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದ್ದಾರೆ.

ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಅಜ್ಜರಕಾಡು ಪುರಭವನದಲ್ಲಿ ನಡೆದ ಉಡುಪಿ ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಸುಮಾರು 15 ಲಕ್ಷ ರು. ಮೊತ್ತದ ಉಚಿತ ನೋಟ್ ಪುಸ್ತಕ ಮತ್ತು ಶೈಕ್ಷಣಿಕ ಪರಿಕರಗಳ ವಿತರಣೆ, ಪ್ರತಿಭಾ ಪುರಸ್ಕಾರ ಹೊಸ ಸಸಿ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ, ಹಸಿರು ಜಾಗೃತಿ ಅಂಗವಾಗಿ ಭಿತ್ತಿಪತ್ರ ಅನಾವರಣ, ಶಾಲಾ ಮಕ್ಕಳಿಗೆ ಗಿಡ ವಿತರಣೆ, ಕನ್ನಡ ಮಾಧ್ಯಮದ 35 ಶಾಲಾ ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ಮೌಲ್ಯದ ನೋಟ್ ಪುಸ್ತಕ, ಶಿಕ್ಷಣ ಪರಿಕರ, ಸಮವಸ್ತ್ರ ವಿತರಣೆ ನಡೆಯಿತು.

ಉಡುಪಿ ತಹಸೀಲ್ದಾರ್ ಪಿ.ಗುರುರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್. ಮಾತನಾಡಿದರು. ಶಿಕ್ಷಕ ಹಾಗೂ ತರಬೇತಿದಾರ ಕೆ.ರಾಜೇಂದ್ರ ಭಟ್ ಬೆಳ್ಮಣ್ಣು ವಿಶೇಷ ಉಪನ್ಯಾಸ ನೀಡಿದರು.

ಉಡುಪಿ ನಗರಸಭೆ ಪರಿಸರ ಅಭಿಯಂತರ ರವಿ ಪ್ರಕಾಶ್, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್, ಸೊಸೈಟಿ ನಿರ್ದೇಶಕರಾದ ಪುರುಷೋತ್ತಮ ಶೆಟ್ಟಿ, ಜಯ ಶೆಟ್ಟಿ, ಸದಾಶಿವ ನಾಯಕ್, ಎಲ್.ಉಮಾನಾಥ, ವಿನಯ ಕುಮಾರ್, ಅಬ್ದುಲ್ ರಜಾಕ್ ಮತ್ತು ಜಾರ್ಜ್ ಸ್ಯಾಮ್ಯುಯೆಲ್ ಇದ್ದರು.

ಸದಾನಂದ ಎಸ್. ಪ್ರಾರ್ಥಿಸಿದರು. ಶಾಖಾ ವ್ಯವಸ್ಥಾಪಕ ನವೀನ್ ಕೆ. ನಿರೂಪಿಸಿದರು. ಸೊಸೈಟಿ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ವಂದಿಸಿದರು. ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಸಹಕರಿಸಿದರು.