ಬಾದಾಮಿ: ರಥಯಾತ್ರೆಗೆ ಅದ್ಧೂರಿ ಸ್ವಾಗತ

| Published : Oct 08 2024, 01:01 AM IST

ಸಾರಾಂಶ

ಡಿ.21, 22, 23 ರಂದು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರಕ್ಕೆ ಆಗಮಿಸಿದ್ದ ಕನ್ನಡ ಜ್ಯೋತಿ ರಥ ಯಾತ್ರೆಗೆ ಸೋಮವಾರ ನಗರದ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ನಾಡದೇವತೆಗೆ ಮಾಲಾರ್ಪಣೆ ಮಾಡಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಕನ್ನಡಪ್ರಭ ವಾರ್ತೆ ಬಾದಾಮಿ

ಡಿ.21, 22, 23 ರಂದು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರಕ್ಕೆ ಆಗಮಿಸಿದ್ದ ಕನ್ನಡ ಜ್ಯೋತಿ ರಥ ಯಾತ್ರೆಗೆ ಸೋಮವಾರ ನಗರದ ಪಿಕಾರ್ಡ್‌ ಬ್ಯಾಂಕ್ ಆವರಣದಲ್ಲಿ ನಾಡದೇವತೆಗೆ ಮಾಲಾರ್ಪಣೆ ಮಾಡಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ತಾಲೂಕಾಡಳಿತದ ವತಿಯಿಂದ ತಹಸೀಲ್ದಾರ್‌ ಮಧುರಾಜ್ ಮತ್ತು ಪುರಸಭೆ ಅಧ್ಯಕ್ಷ ಪಾಂಡು ಕಟ್ಟೀಮನಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಶಂಕರ ಕನಕಗಿರಿ, ಮಂಜುನಾಥ ಹೊಸಮನಿ, ರಾಮವ್ವ ಮಾದರ, ಮಹಾಂತೇಶ ತಳವಾರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಿವುಕುಮಾರ ಹಿರೇಮಠ, ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ, ಗೌರವ ಕಾರ್ಯದರ್ಶಿ ಡಾ.ಚಂದ್ರಶೇಖರ ಕಾಳನ್ನವರ, ತಾಲೂಕು ಕಸಾಪ ಅಧ್ಯಕ್ಷ ಬಿ.ಎಫ್.ಹೊರಕೇರಿ, ತಾ.ಪಂ.ಇಒ ಮಲ್ಲಿಕಾರ್ಜುನ ಬಡಿಗೇರ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ ತಿರಕನ್ನವರ, ಮುಖ್ಯಾಧಿಕಾರಿ ಬಂದೆನವಾಜ ಡಾಂಗೆ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಬಿ. ಪಾಟೀಲ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಂ.ಎ.ಹದ್ಲಿ, ಶಿಕ್ಷಣ ಸಂಯೋಜಕರಾದ ಬಿ.ಟಿ. ಹಳ್ಳಿ, ವೈ.ಬಿ. ಚಲವಾದಿ, ಎಸ್.ಪಿ. ಗೌಡರ, ಎಂ.ಸಿ.ನಾಲತವಾಡ, ಬಿ.ಕೆ. ಚಿಮಲ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಿ.ಎಫ್. ಕುಂಬಾರ, ಸಮೂಹ ಸಂಪನ್ಮೂಲ ವ್ಯಕ್ತಿ ಎಂ.ಕೆ. ಬಡಿಗೇರ ಸೇರಿದಂತೆ ವಿವಿದ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಶಾಲೆಯ ಮುಖ್ಯಶಿಕ್ಷಕರು, ಶಾಲಾ ಮಕ್ಕಳು ಭಾಗವಹಿಸಿದ್ದರು.