ಸಾರಾಂಶ
ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯನ್ನು ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್ ಹಾಗೂ ಕಾರ್ಯದರ್ಶಿ ಪ್ರಮಿಳಾ ಶೆಟ್ಟಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಮಡಿಕೇರಿಯ ಸರ್ಕಾರಿ ಮಹಿಳಾ ಕಾಲೇಜು ಮತ್ತು ರೋಟರಿ ಮಡಿಕೇರಿ ವುಡ್ಸ್ ಆಶ್ರಯದಲ್ಲಿ ನಗರದಲ್ಲಿ ನಡೆದ ಜಿಲ್ಲಾಮಟ್ಟದ ಅಂತರ್ ಕಾಲೇಜು ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಮಹಿಳಾ ವಿಭಾಗದಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜು ಪ್ರಶಸ್ತಿ ಗೆದ್ದುಕೊಂಡಿದೆ.ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯನ್ನು ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್ ಹಾಗೂ ಕಾರ್ಯದರ್ಶಿ ಪ್ರಮಿಳಾ ಶೆಟ್ಟಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.ಸರ್ಕಾರಿ ಮಹಿಳಾ ಕಾಲೇಜು ಪ್ರಾಂಶುಪಾಲರಾದ ನಿರ್ಮಲಾ, ದೈಹಿಕ ಶಿಕ್ಷಣ ನಿರ್ದೇಶಕರಾದ ರಾಖಿ ಪೂವಣ್ಣ, ರೋಟರಿ ವುಡ್ಸ್ ಮಾಜಿ ಅಧ್ಯಕ್ಷ ವಸಂತ್ ಕುಮಾರ್, ರವಿಕುಮಾರ್, ಕಶ್ಯಪ್, ರಾಜೇಶ್ ಚೌಧರಿ ಮತ್ತಿತರರು ಉಪಸ್ಥಿತರಿದ್ದರು.ಪಂದ್ಯಾವಳಿಯ ಪುರುಷರ ಹಾಗೂ ಮಹಿಳೆಯರ ವಿಭಾಗಗಳಲ್ಲಿ ತಲಾ ಎಂಟು ತಂಡಗಳು ಸ್ಪರ್ಧಿಸಿದವು. ಎರಡೂ ವಿಭಾಗಗಳಲ್ಲಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮತ್ತು ಗೋಣಿಕೊಪ್ಪದ ಕಾವೇರಿ ಕಾಲೇಜಿನ ತಂಡಗಳು ಅಂತಿಮ ಸುತ್ತನ್ನು ಪ್ರವೇಶಿಸಿದ್ದು ವಿಶೇಷವಾಗಿತ್ತು.ವಿಜೇತರು:ಪುರುಷರ ವಿಭಾಗದಲ್ಲಿ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಪ್ರಥಮ ಸ್ಥಾನ ಮತ್ತು ಗೋಣಿಕೊಪ್ಪದ ಕಾವೇರಿ ಕಾಲೇಜು ದ್ವಿತೀಯ ಸ್ಥಾನ ಗಳಿಸಿತು.ಮಹಿಳೆಯರ ವಿಭಾಗದಲ್ಲಿ ಗೋಣಿಕೊಪ್ಪದ ಕಾವೇರಿ ಕಾಲೇಜು ಪ್ರಥಮ ಸ್ಥಾನ ಮತ್ತು ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು.