ಸಾರಾಂಶ
ಸಂಸದ ಶ್ರೇಯಸ್ ಎಂ ಪಟೇಲ್ ಅವರ 33ನೇ ಹುಟ್ಟುಹಬ್ಬ ಅಂಗವಾಗಿ ಹೋಬಳಿಯ ವಿರೂಪಾಕ್ಷಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣೆ ಮಾಡಲಾಯಿತು. ಗ್ರಾಮೀಣ ಮಕ್ಕಳಲ್ಲಿ ಬುದ್ಧಿವಂತಿಕೆಯಿದ್ದು ಇಂತಹ ಮಕ್ಕಳನ್ನು ಪ್ರೋತ್ಸಾಹಿಸಲು ಶಿಕ್ಷಕರು ಮುಂದಾಗಬೇಕು ವಿದ್ಯಾರ್ಥಿಗಳು ಕಷ್ಟಪಟ್ಟು ಓದಬೇಕು ಪಾಲಕರು ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸುವುದು ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ
ತಾಲೂಕಿನ ಯುವ ಕಾಂಗ್ರೆಸ್ ಮುಖಂಡ ಯುವರಾಜ್ ನೇತೃತ್ವದಲ್ಲಿ ಸಂಸದ ಶ್ರೇಯಸ್ ಎಂ ಪಟೇಲ್ ಅವರ 33ನೇ ಹುಟ್ಟುಹಬ್ಬ ಅಂಗವಾಗಿ ಹೋಬಳಿಯ ವಿರೂಪಾಕ್ಷಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣೆಯನ್ನು ಶುಕ್ರವಾರ ಮಾಡಲಾಯಿತು.ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಯುವರಾಜ್ ಮಾತನಾಡಿ ಜಿಲ್ಲೆಯ ಯುವ ಸಂಸದರಾದ ಶ್ರೇಯಸ್ ಪಟೇಲ್ ಅವರ 33ನೇ ಹುಟ್ಟುಹಬ್ಬ ಅಂಗವಾಗಿ ತಾಲೂಕಿನ ವಿವಿಧ ಹೋಬಳಿ ಕೇಂದ್ರ ಸೇರಿದಂತೆ ಸರ್ಕಾರಿ ಶಾಲೆಯ ಸುಮಾರು 150 ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ ಕಾರ್ಯಕ್ರಮವನ್ನು ತಾಲೂಕು ಯುವ ಕಾಂಗ್ರೆಸ್ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಹಾಗೂ ತಾಲೂಕಿನ ಅಭಿವೃದ್ಧಿಗೆ ಸಂಸದ ಶ್ರೇಯಸ್ ಪಟೇಲ್ ಅವರು ಹೆಚ್ಚಿನ ರೀತಿಯಲ್ಲಿ ಸ್ಪಂದಿಸುತ್ತಿದ್ದು, ರಾಜ್ಯ ಸರ್ಕಾರದ ಹೆಚ್ಚಿನ ಸಹಕಾರದೊಂದಿಗೆ ತಾಲೂಕಿನ ಅಭಿವೃದ್ಧಿ ಕೆಲಸಗಳಿಗೆ ಸಂಸದರು ಕೈಜೋಡಿಸುವಂತೆ ಮನವಿ ಮಾಡಿದರು. ಗ್ರಾಮೀಣ ಮಕ್ಕಳಲ್ಲಿ ಬುದ್ಧಿವಂತಿಕೆಯಿದ್ದು ಇಂತಹ ಮಕ್ಕಳನ್ನು ಪ್ರೋತ್ಸಾಹಿಸಲು ಶಿಕ್ಷಕರು ಮುಂದಾಗಬೇಕು ವಿದ್ಯಾರ್ಥಿಗಳು ಕಷ್ಟಪಟ್ಟು ಓದಬೇಕು ಪಾಲಕರು ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸುವುದು ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಜೆ. ಕಿರಣ್, ಗ್ರಾಮ ಪಂಚಾಯಿತಿ ಸದಸ್ಯ ಕಿರಣ್ ಗವಿರಂಗಯ್ಯ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಧನಂಜಯ್, ಮುಖಂಡರಾದ ಮಖಾನ್ ವಿನೋದ್, ಪುನೀತ್, ರಜನ್, ದಿಲೀಪ್, ಸಾನಿಕ್,ನಿತಿನ್, ಆಕಾಶ್, ದೀಪು ದರ್ಶನ್, ಯಶ್ವಂತ್, ಪ್ರಮೋದ್, ಜಯಂತ್, ಅಭಿಷೇಕ್, ರುದ್ರೇಶ್,ಗ್ರಾಮಸ್ಥರಾದ ತಿರುಮಲ, ಎಲ್ಐಸಿ ಸುಬ್ಬೇಗೌಡ, ಮುಖ್ಯ ಶಿಕ್ಷಕಿ ಪ್ರೇಮ, ಸಹ ಶಿಕ್ಷಕ ನಾರಾಯಣಸ್ವಾಮಿ ಹಾಜರಿದ್ದರು.