ಕನ್ನಡಪ್ರಭ ವಾರ್ತೆ ಹಾಸನನಗರದ ರಿಂಗ್ ರಸ್ತೆಯ ಸಮೀಪದ ಸತ್ಯಮಂಗಲ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಸೋಮವಾರ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.ನಂತರ ಸೋಪಾನಕಟ್ಟೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ೨೫ರಿಂದ ೩೦ ವರ್ಷಗಳಲ್ಲಿ ಹಾಸನ ನಗರ ಸಾಕಷ್ಟು ವಿಸ್ತಾರಗೊಂಡಿದ್ದು, ಹೊಸ ಬಡಾವಣೆಗಳು ನಿರ್ಮಾಣವಾಗಿವೆ. ಆದರೆ ನಗರ ಬೆಳವಣಿಗೆಗೆ ಅನುಗುಣವಾಗಿ ಮೂಲಸೌಕರ್ಯ ಕಲ್ಪಿಸುವುದು ಅತ್ಯಗತ್ಯ. ಹಾಸನವನ್ನು ಸುಂದರ, ಸ್ವಚ್ಛ ಹಾಗೂ ವ್ಯವಸ್ಥಿತ ನಗರವನ್ನಾಗಿ ರೂಪಿಸಲು ಸಮಗ್ರ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗುವುದು ಎಂದರು. ಹಾಸನ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ಹಿನ್ನೆಲೆಯಲ್ಲಿ ಸರ್ಕಾರ ಬಜೆಟ್ನಲ್ಲಿ ₹ ೨೦೦ ಕೋಟಿ ಅನುದಾನ ಘೋಷಿಸಿದೆ. ಈ ಅನುದಾನ ಸದ್ಬಳಕೆಗೆ ಅಧಿಕಾರಿಗಳು ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು. ನಗರದ ಅಭಿವೃದ್ಧಿಗೆ ಅಗತ್ಯ ಅನುದಾನ ತರಲು ಮೇಲ್ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ನಗರದಲ್ಲಿ ಒಳಚರಂಡಿ ವ್ಯವಸ್ಥೆ (ಯುಜಿಡಿ), ರಸ್ತೆ ಅಭಿವೃದ್ಧಿ ಹಾಗೂ ಕೆರೆಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಮಳೆನೀರು ಸಂಗ್ರಹಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಬಡಾವಣೆಗಳಲ್ಲಿ ವಾಕಿಂಗ್ ಪಥ, ಉದ್ಯಾನವನ ಹಾಗೂ ಉತ್ತಮ ಪರಿಸರ ನಿರ್ಮಾಣಕ್ಕೂ ಒತ್ತು ನೀಡಬೇಕು ಎಂದರು.ಹಾಸನದೊಂದಿಗೆ ನನಗೆ ಭಾವನಾತ್ಮಕ ಸಂಬಂಧವಿದ್ದು, ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿ ನಾಯಕನಾಗಿ ಬೆಳೆದ ದಿನಗಳಿಂದಲೂ ನಗರದೊಂದಿಗೆ ನಂಟಿದೆ. ನನ್ನ ಅಧಿಕಾರಾವಧಿಯಲ್ಲಿ ಸಾಧ್ಯವಾದಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡು ಹಾಸನದ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವುದು ನನ್ನ ಜವಾಬ್ದಾರಿ ಎಂದು ಹೇಳಿದರು. ಹಾಸನಾಂಬೆ ಉತ್ಸವವನ್ನು ಅಚ್ಚುಕಟ್ಟಾಗಿ ಆಯೋಜಿಸಿರುವುದು ಸಂತಸದ ವಿಚಾರ. ಅಮೆರಿಕ ಸೇರಿದಂತೆ ವಿದೇಶಗಳಿಂದಲೂ ಭಕ್ತರು ದರ್ಶನಕ್ಕೆ ಆಗಮಿಸುತ್ತಿರುವುದು ಹಾಸನದ ಹೆಗ್ಗಳಿಕೆಯನ್ನು ಹೆಚ್ಚಿಸಿದೆ. ಉತ್ಸವದ ಅಂಗವಾಗಿ ಕ್ರೀಡೆ, ಕುಸ್ತಿ, ಕಬಡ್ಡಿ, ವಾಲಿಬಾಲ್ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಇಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕೆಲಸದ ಬಗ್ಗೆ ಓದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡಲಾಯಿತು.ಇದೇ ವೇಳೆ ಜಿಲ್ಲಾ ರೆಡ್ಕ್ರಾಸ್ ಸಂಸ್ಥೆ ಅಧ್ಯಕ್ಷ ಎಚ್.ಪಿ. ಮೋಹನ್, ಹಸಿರುಭೂಮಿ ಪ್ರತಿಷ್ಠಾನದ ಅಧ್ಯಕ್ಷ ಸಿ.ಬಿ. ವೆಂಕಟೇಗೌಡ, ಸತ್ಯಮಂಗಲ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಟಿ. ಚಂದ್ರಶೇಖರ್, ಹೇಮಾ ಮೋಹನ್, ಕೆ. ಶಾರದಾ, ಎಚ್.ಇ. ಅರುಣ್ ಕುಮಾರ್, ಎಸ್.ಆರ್. ಮೋಹನ್ ಕುಮಾರ್, ಆರ್.ಟಿ. ವೆಂಕಟೇಗೌಡ, ಎಂ.ಆರ್. ಚಂದ್ರಶೇಖರ್, ಜೆ.ಎಂ. ಮಹೇಂದ್ರ, ನಾಗೇಶ್, ಎಸ್. ಎಸ್. ಪಾಷಾ, ಬಿ.ಆರ್. ಉದಯಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸುಗ್ಗಿ ಯೋಗ ಕೇಂದ್ರದ ಪವಿತ್ರ ಕಾರ್ಯಕ್ರಮ ನಿರೂಪಿಸಿದರು.
ಸತ್ಯಮಂಗಲ ಕೆರೆ ಉಸ್ತುವಾರಿ ಸಚಿವರಿಂದ ಬಾಗಿನ ಅರ್ಪಣೆ
ಹಾಸನದೊಂದಿಗೆ ನನಗೆ ಭಾವನಾತ್ಮಕ ಸಂಬಂಧವಿದ್ದು, ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿ ನಾಯಕನಾಗಿ ಬೆಳೆದ ದಿನಗಳಿಂದಲೂ ನಗರದೊಂದಿಗೆ ನಂಟಿದೆ. ನನ್ನ ಅಧಿಕಾರಾವಧಿಯಲ್ಲಿ ಸಾಧ್ಯವಾದಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡು ಹಾಸನದ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವುದು ನನ್ನ ಜವಾಬ್ದಾರಿ ಎಂದು ಹೇಳಿದರು. ಹಾಸನಾಂಬೆ ಉತ್ಸವವನ್ನು ಅಚ್ಚುಕಟ್ಟಾಗಿ ಆಯೋಜಿಸಿರುವುದು ಸಂತಸದ ವಿಚಾರ. ಅಮೆರಿಕ ಸೇರಿದಂತೆ ವಿದೇಶಗಳಿಂದಲೂ ಭಕ್ತರು ದರ್ಶನಕ್ಕೆ ಆಗಮಿಸುತ್ತಿರುವುದು ಹಾಸನದ ಹೆಗ್ಗಳಿಕೆಯನ್ನು ಹೆಚ್ಚಿಸಿದೆ. ಉತ್ಸವದ ಅಂಗವಾಗಿ ಕ್ರೀಡೆ, ಕುಸ್ತಿ, ಕಬಡ್ಡಿ, ವಾಲಿಬಾಲ್ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಇಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕೆಲಸದ ಬಗ್ಗೆ ಓದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.