ಜಮಖಂಡಿಯ ತಾಲೂಕಿನ ಮೂವರು ಜಿಲ್ಲೆಗೆ ಟಾಪರ್2024-25ನೇ ಸಾಲಿನ ದ್ವಿತೀಯ ಪಿಯುಸಿ ಕಲಾ, ವಾಣಿಜ್ಯ, ವಿಜ್ಞಾನ 3 ವಿಭಾಗದಲ್ಲೂ ತಾಲೂಕಿನ ಮೂವರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದ ತುಂಗಳ ವಿಜ್ಞಾನ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಭೂಮಿಕಾ ಬಾಗೇವಾಡಿ 594 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ರ್ಯಾಂಕ್ ಹಾಗೂ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿದ್ದಾರೆ.