ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ: ಎಸ್.ಆರ್. ಪಾಟೀಲಆರ್ಥಿಕ ಸಹಕಾರದಿಂದಲೇ ಯಾವುದಾದರೂ ಕೆಲಸ ಮಾಡಲು ಸಾಧ್ಯ. ಸಹಕಾರಿ ಕ್ಷೇತ್ರದಿಂದ ಆ ಭಾಗದ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾಣಲು ಸಾಧ್ಯ ಎನ್ನುವುದಕ್ಕೆ ಬೀಳಗಿ ತಾಲೂಕಿನ ಎಸ್.ಆರ್. ಪಾಟೀಲ ಮೆಡಿಕಲ್ ಕಾಲೇಜು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಾಕ್ಷಿಯಾಗಿವೆ ಎಂದು ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷರು, ಮಾಜಿ ಸಚಿವರಾದ ಎಸ್.ಆರ್. ಪಾಟೀಲ ತಿಳಿಸಿದರು.