ಮಹಾತ್ಮ ಗಾಂಧೀಜಿಯವರ ಜೀವನವೇ ಒಂದು ಸಂದೇಶಸತ್ಯ, ಶಾಂತಿ, ಅಹಿಂಸೆಯ ಹರಿಕಾರ, ದೇಶದ ಜನರಿಂದ ಬಾಪೂಜಿ ಎಂದೇ ಕರೆಯಲ್ಪಟ್ಟ ಮಹಾತ್ಮ ಗಾಂಧೀಜಿಯವರ ಜೀವನವೇ ಒಂದು ಸಂದೇಶವಾಗಿದ್ದು, ಅವರ ಹೆಸರು ಭಾರತೀಯರ ಮನಸಿನಲ್ಲಿ ಇಂದಿಗೂ ಅಚ್ಚಳಿಯದೆ ಉಳಿದಿದೆ. ಭಾರತಕ್ಕೆ ಸ್ವಾತಂತ್ರ್ಯದೊರಕಿಸಿಕೊಡಲು ಅಹಿಂಸಾ ಮಾರ್ಗದಲ್ಲಿ ಹೋರಾಟ ಮಾಡಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ದಿನದಂದು ದೇಶದ ಜನರು ಅವರನ್ನು ನೆನಪಿಸಿಕೊಳ್ಳುತ್ತಾರೆ ಎಂದು ಎಸ್.ಆರ್.ಕಂಠಿ ಕಾಲೇಜಿನ ಪ್ರಾಚಾರ್ಯ ಪ್ರೊ.ಮಲ್ಲಣ್ಣ ಜಿಗಬಡ್ಡಿ ಹೇಳಿದರು.