ವಿಜೃಂಭಣೆಯಿಂದ ರಾಜ್ಯೋತ್ಸವ ಆಚರಣೆಗೆ ನಿರ್ಧಾರನ.೧ ರಂದು ರಬಕವಿ ನಗರದಲ್ಲಿ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲು ಶಂಕರಲಿಂಗ ದೇವಸ್ಥಾನದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಅಂದು ಬೆಳಗ್ಗೆ ೯ ಗಂಟೆಗೆ ರಬಕವಿ ಹಳೆಯ ಬಸ್ ನಿಲ್ದಾಣದ ಬಳಿಯ ಬಾಲಿಕಿಯರ ಪ್ರೌಢಶಾಲೆ ಆವರಣದಲ್ಲಿನ ಭವ್ಯ ಅಲಂಕೃತ ವೇದಿಕೆಯಲ್ಲಿ ನಾಡದೇವಿ ಶ್ರೀಭುವನೇಶ್ವರಿ ತಾಯಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸಾಮೂಹಿಕ ನಾಡಗೀತೆ ಮತ್ತು ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು.