ಯುಕೆಪಿ-ಮೂರು ವರ್ಷದೊಳಗೆ ರೈತರಿಗೆ ಪರಿಹಾರ: ಸಚಿವ ಎಚ್.ಕೆ. ಪಾಟೀಲಉತ್ತರ ಕರ್ನಾಟಕದ ಬಹುದೊಡ್ಡ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಮೂರು ವರ್ಷಗಳ ಅವಧಿಯಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ಪರಿಹಾರ ಒದಗಿಸಲಾಗುವುದು ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದಿಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.