ತಾಯಿ, ಮಕ್ಕಳ ಅಪೌಷ್ಟಿಕ ನಿವಾರಣೆಗೆ ಪೋಷಣ್ ಸಹಾಯಕಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಲ್ಲಿ ಕಂಡುಬರುವ ಅಪೌಷ್ಟಿಕತೆ ಕೊರತೆ ನೀಗಿಸಲು ಸರ್ಕಾರವು ತಾಯಿ ಮತ್ತು ಮಕ್ಕಳ ಆರೈಕೆಗಾಗಿ ಪೋಷಣ್ ಮಾಹೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಇವರಿಬ್ಬರಲ್ಲೂ ಅಪೌಷ್ಟಿಕ ನಿವಾರಣೆಗೆ ಇದು ಸಹಾಯಕ ಎಂದು ಪಪಂ ಮುಖ್ಯಾಧಿಕಾರಿ ಜ್ಯೋತಿ ಉಪ್ಪಾರ ಹೇಳಿದರು.