ಮಕ್ಕಳ ಪಠ್ಯೇತರ ಬೋಧನೆಗೂ ಒತ್ತು ನೀಡಿಕನ್ನಡಪ್ರಭ ವಾರ್ತೆ ಬಾಗಲಕೋಟೆ ಶಿಕ್ಷಕರು ಮಕ್ಕಳಿಗೆ ಕೇವಲ ಪಠ್ಯ ಬೋಧನೆ ಮಾಡದೇ, ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಪಠ್ಯೇತರ ಚಟುವಟಿಕೆಗೂ ಒತ್ತು ನೀಡಬೇಕು ಎಂದು ಬಿಟಿಡಿಎ ಅಧ್ಯಕ್ಷ, ಶಾಸಕ ಎಚ್.ವೈ.ಮೇಟಿ ಹೇಳಿದರು. ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಶಾಲಾ ಯೋಜನೆಯಡಿ ₹1.20 ಕೋಟಿ ಮೊತ್ತದಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.