ಮುಡಾ ಹಗರಣ: ಸಿದ್ದರಾಮಯ್ಯ ಮೇಲಿನ ಆರೋಪ ನಿರಾಧಾರಸಿಎಂ ಸಿದ್ದರಾಮಯ್ಯನವರು ಮೈಸೂರಿನಲ್ಲಿ ದಲಿತರ ಜಮೀನನ್ನು ಕಬಳಿಸಿದ್ದಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಿರುವ ಆರೋಪ ಸಂಪೂರ್ಣ ನಿರಾಧಾರವಾಗಿದೆ. ಇದು ರಾಜಕೀಯ ದುರುದ್ದೇಶದಿಂದ ಸಿಎಂ ಸಿದ್ದರಾಮಯ್ಯ ಇವರನ್ನು ಗುರಿಯಾಗಿಟ್ಟುಕೊಂಡು ನಡೆಯುತ್ತಿರುವ ಪಿತೂರಿಯಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಹನಮಂತ ಅಪ್ಪನ್ನವರ ಆರೋಪಿಸಿದರು.