ದೇಶದ ಅಭ್ಯುದಯಕ್ಕೆ ಮಾಡುವ ಸೇವೆಯೂ ದೇಶಪ್ರೇಮಕನ್ನಡಪ್ರಭ ವಾರ್ತೆ ಲೋಕಾಪುರಸೇನೆ ಸೇರುವುದು ಮಾತ್ರವಲ್ಲ, ದೇಶದ ಅಭ್ಯುದಯಕ್ಕಾಗಿ ಸಲ್ಲಿಸುವ ಪ್ರತಿ ಸೇವೆಯೂ ದೇಶ ಪ್ರೇಮವೆನಿಸುತ್ತದೆ ಎಂದು ಉಪತಹಸೀಲ್ದಾರ್ ಸತೀಶ ಬೇವೂರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾಜಿ ಸೈನಿಕರ ಸಂಘದಿಂದ ಹಮ್ಮಿಕೊಂಡ ಕಾರ್ಗಿಲ್ ವಿಜಯೋತ್ಸವದಲ್ಲಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯದ ನಂತರ ಐದು ಪ್ರಮುಖ ಯುದ್ಧಗಳು ನಡೆದಿವೆ. ಪಾಕಿಸ್ತಾನ ನಾಲ್ಕು ಯುದ್ದಗಳಲ್ಲಿ ಸೋತಿದ್ದು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದವರ ಬಲಿದಾನವನ್ನು ಸ್ಮರಿಸಬೇಕು, ಸೈನಿಕರ ನಿಸ್ವಾರ್ಥ ಸೇವೆ ಸ್ಮರಣೀಯ ಎಂದರು.