ನದಿಪಾತ್ರದ ಗ್ರಾಮಗಳಲ್ಲಿ ಆತಂಕ ಶುರುಕನ್ನಡಪ್ರಭ ವಾರ್ತೆ ಮುಧೋಳ ಘಟಪ್ರಭ ಮತ್ತು ಕೃಷ್ಣಾ ನದಿಯ ನೀರಿನ ಪ್ರಮಾಣ ಪ್ರತಿದಿನ ಹೆಚ್ಚುತ್ತಲಿದ್ದು, ನದಿ ಪಾತ್ರದ ಜನರು ಆತಂಕ ಪಡುವಂತಾಗಿದೆ. ಜಿಲ್ಲೆಯ ನದಿ ಪಾತ್ರದ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು. ಸ್ಥಳಾಂತರಗೊಂಡ ಕುಟುಂಬದ ಎಲ್ಲ ಸದಸ್ಯರಿಗೆ ಊಟ, ವಸತಿ, ಆರೋಗ್ಯ, ಶೌಚಾಲಯ, ಬಟ್ಟೆ, ಹಾಸಿಗೆ, ಹೊದಿಕೆ ಸೇರಿದಂತೆ ಸಕಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಜಿಲ್ಲಾ ಮತ್ತು ಆಯಾ ತಾಲೂಕಾ ಆಡಳಿತ ಸಕಲ ಸಿದ್ದತೆ ಮಾಡಿಕೊಳ್ಳಬೇಕು. ಅಲ್ಲದೇ, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.