ಪುಟ...3ಕ್ಕೆಲೀಡ್ ಬಾಕ್ಸ್ ಹಿಪ್ಪರಗಿ ಡ್ಯಾಂನಿಂದ 1.95 ಲಕ್ಷ ಕ್ಯುಸೆಕ್ ನೀರು ಬಿಡುಗಡೆಕನ್ನಡಪ್ರಭ ವಾರ್ತೆ ಜಮಖಂಡಿ ಹಿಪ್ಪರಗಿ ಜಲಾಶಯದಿಂದ 1.95 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾನದಿಗೆ ಹರಿಬಿಡಲಾಗುತ್ತಿದೆ ಎಂದು ತಹಸೀಲ್ದಾರ್ ಸದಾಶಿವ ಮಕ್ಕೊಜಿ ಮಾಹಿತಿ ನೀಡಿದ್ದಾರೆ. ಜಲಾಶಯದ ನೀರಿನ ಪ್ರಮಾಣ ಹೆಚ್ಚಾಗದಂತೆ ಕ್ರಮ ಜರುಗಿಸಲಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಒಳ ಹರಿವಿನ ಪ್ರಮಾಣದಷ್ಟು ನೀರನ್ನು ನದಿಪಾತ್ರಕ್ಕೆ ಬಿಡಲಾಗಿದೆ.