ಹಿಪ್ಪರಗಿ ಜಲಾಶಯಕ್ಕೆ ೨೦,೭೯೦ ಕ್ಯುಸೆಕ್ ನೀರುಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ: ಮಹಾರಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಸಮೀಪದ ಕೃಷ್ಣಾನದಿ ತುಂಬಿ ಹರಿಯುತ್ತಿದ್ದು, ೨೦,೭೯೦ ಕ್ಯುಸೆಕ್ಸ್ ನೀರು ಹಿಪ್ಪರಗಿ ಜಲಾಶಯಕ್ಕೆ ಹರಿದು ಬರುತ್ತಿದೆ. ಮಹಾರಾಷ್ಟ್ರದ ರಾಜಾಪೂರ ಜಲಾಶಯದಿಂದ ನೀರು ಭಾರಿ ಪ್ರಮಾಣದಲ್ಲಿ ಕೃಷ್ಣಾ ನದಿಗೆ ಹರಿದು ಬರುತ್ತಿದ್ದು, ಕಳೆದ ಕೆಲವು ದಿನಗಳಿಂದ ಉತ್ತಮ ಪ್ರಮಾಣದ ನೀರು ಹರಿದು ಬಂದಿದೆ.