ಇಂದು ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭತಾಲೂಕು ಗಾಣಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘ, ಜ್ಯೋತಿ ಪತ್ತಿನ ಸಹಕಾರಿ ಸಂಘ ನಿ., ಬೀಳಗಿ, ಗಾಣಿಗ ಸಮಾಜ ನೌಕರರ ಸಂಘ, ಯುವ ಘಟಕ, ನಗರ ಘಟಕ ಹಾಗೂ ಮಹಿಳಾ ಘಟಕ ಸಂಯುಕ್ತ ಆಶ್ರಯದಲ್ಲಿ ಸಿದ್ಧೇಶ್ವರ ದೇವಾಲಯದಲ್ಲಿ ಜು.14 ರಂದು ಬೆಳಗ್ಗೆ 11.05ಕ್ಕೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬೀಳಗಿ ತಾಲೂಕು ಗಾಣಿಗ ಸಮಾಜದ ಅಧ್ಯಕ್ಷ ಹನುಮಂತ ಸೂಳಿಕೇರಿ ಹೇಳಿದರು.