ನಗರಸಭೆ ಸಾಮಾನ್ಯ ಸಭೆಯಲ್ಲಿ ಲೇಔಟ್ ಸದ್ದುಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಹೊಸ ಲೇಔಟ್ ನಿರ್ಮಾಣ ಮಾಡುವಲ್ಲಿ ನಗರಸಭೆ ನಿಯಮಗಳನ್ನು ಪಾಲನೆ ಮಾಡುವಲ್ಲಿ ವಿಫಲವಾಗಿದ್ದು, ಕಳಪೆ ಕಾಮಗಾರಿ ಹಾಗೂ ಸುಳ್ಳು ಮಾಹಿತಿ ನೀಡಿ ಲೇಔಟ್‌ಗಳನ್ನು ನಿರ್ಮಿಸುತ್ತಿರುವವರ ವಿರುದ್ಧ ನಗರಸಭೆಯ ಸದಸ್ಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಆಡಳಿತ ಮತ್ತು ವಿಪಕ್ಷ ಸದಸ್ಯರ ಮಧ್ಯೆ ವಾಗ್ವಾದ ನಡೆದಿದ್ದು, ಈ ಬಗ್ಗೆ ಪರಿಶೀಲನಗೆ ಅಧ್ಯಕ್ಷರನ್ನೊಳಗೊಂಡ ಸದಸ್ಯರ ಸಮಿತಿ ರಚಿಸಲು ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಗಿದೆ.