ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಯಾವ ಬಣಕ್ಕೆ?ಪಟ್ಟಣ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಆ.30 ರಂದು ಚುನಾವಣೆ ಜರುಗಲಿದೆ. ಪುರಸಭೆಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವುದು ನಿಶ್ಚಿತ. ಆದರೆ, ಸಿಎಂ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಅಧ್ಯಕ್ಷ, ಉಪಾಧ್ಯಕ್ಷರಾಗುತ್ತಾರೋ, ಶಾಸಕರ ಬಣದಿಂದ ಗುರುತಿಸಿಕೊಂಡವರು ಅಧ್ಯಕ್ಷ, ಉಪಾಧ್ಯಕ್ಷರಾಗುತ್ತಾರೋ ಎಂಬುವುದು ಇಂದು ನಿರ್ಧಾರವಾಗಲಿದೆ.