ಬಡವನಾದರೂ ಸಮಾಜದಲ್ಲಿ ಜಂಗಮರಿಗೆ ಉನ್ನತ ಸ್ಥಾನಜಂಗಮರು ಬಡತನದಲ್ಲಿದ್ದರೂ ಸಮಾಜದಲ್ಲಿ ಅವರಿಗೆ ಅತ್ಯುನ್ನತ ಸ್ಥಾನವಿದೆ. ಆ ಸ್ಥಾನಕ್ಕೆ ತಕ್ಕಂತೆ ನಾವು ನಮ್ಮ ಸಂಪ್ರದಾಯ, ಸಂಸ್ಕೃತಿ ಕಾಪಾಡಿಕೊಂಡು ಬೆಳೆಸಿಕೊಂಡು ಬರುವುದು ನಮ್ಮ ಜವಾಬ್ದಾರಿಯಾಗಿದೆ. ನಮ್ಮ ಹಿರಿಯರು ಹಾಕಿಕೊಟ್ಟ ಸಂಪ್ರದಾಯ ಉಳಿಸಿಕೊಂಡರೆ ಮಾತ್ರ ನಮ್ಮ ಸಮಾಜ, ನಮ್ಮ ಧರ್ಮವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಮಾಜಿ ಶಾಸಕ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.