ಪಂಚಾಯತಿ ಅಧಿಕಾರಿಗಳ ಧರಣಿ ಆರಂಭರಾಜ್ಯದ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತೀಕರಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾ ಆಡಳಿತ ಭವನದ ಎದುರು ಪ್ರತಿಭಟನಾ ಧರಣಿ ಆರಂಭಿಸಿತು.