ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಅನನ್ಯ: ರವೀಂದ್ರಕನ್ನಡಪ್ರಭ ವಾರ್ತೆ ಗುಳೇದಗುಡ್ಡ ಯುವ ಜನಾಂಗ ದೇಶದ ಸಂಪತ್ತು. ವಿದ್ಯೆ, ಬುದ್ದಿಶಕ್ತಿ, ದೈಹಿಕ ಶಕ್ತಿ ಇವುಗಳನ್ನು ಬಳಸಿ ರಾಷ್ಟ್ರ ನಿರ್ಮಾಣದಲ್ಲಿ ಯುವಕರು ಸಕ್ರಿಯವಾಗಿ ತೊಡಗಿಕೊಂಡರೆ ರಾಷ್ಟ್ರ ನಿರ್ಮಾಣ ಸಾಧ್ಯ. ಹೀಗಾಗಿ ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ ಅನನ್ಯವಾಗಿದೆ ಎಂದು ಪಿಇ ಟ್ರಸ್ಟ್ ಗೌರವ ಕಾರ್ಯದರ್ಶಿ ರವೀಂದ್ರ ಪಟ್ಟಣಶೆಟ್ಟಿ ಹೇಳಿದರು.