ವಿಪತ್ತು ನಿರ್ವಹಣೆಗೆ ಈಗಲೇ ಸಿದ್ಧತೆ ಮಾಡಿಕೊಳ್ಳಿತಾಲೂಕಿನಲ್ಲಿ ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳ ಸುರಕ್ಷತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲ ಇಲಾಖಾ ಅಧಿಕಾರಿಗಳು ಮುಂಗಾರು ಹಂಗಾಮಿನ ವಿಪತ್ತು ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಬೇಕೆಂದು ಗುಳೇದಗುಡ್ಡ ತಾಲೂಕಿನ ವಿಪತ್ತು ನಿರ್ವಹಣೆ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಲ್.ಐ.ರೋಡಗಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮುನ್ಸೂಚನೆ ನೀಡಿದರು.