ತಪ್ಪಿತಸ್ಥರು ಯಾರೇ ಆಗಿದ್ರು ಕ್ರಮವಾಗಲಿಆ.30 ರಂದು ಗುಳೇದಗುಡ್ಡ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ದಿನ ಗಲಭೆ ಸೃಷ್ಟಿಸಲು ಗೂಂಡಾಗಳನ್ನು ಕರೆಸಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಉಳಿದ ನಾಲ್ವರು ಆರೋಪಿಗಳನ್ನು ಬಂಧಿಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಬಾದಾಮಿ ತಾಲೂಕು ಕಾಂಗ್ರೆಸ್ ಪಕ್ಷದ ಮುಖಂಡರು ಭಾನುವಾರ ಪಿ.ಎಸ್.ಐ.ವಿಠ್ಠಲ ನಾಯಕ ಅವರಿಗೆ ಮನವಿ ಸಲ್ಲಿಸಿದರು.