ಅಭ್ಯರ್ಥಿಗಳ ಹಣೆಬರಹ ಬರೆಯಲಿದ್ದಾರೆ 18,06,277 ಮತದಾರರುಕನ್ನಡಪ್ರಭ ವಾರ್ತೆ ಬಾಗಲಕೋಟೆ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಮಂಗಳವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ 895432 ಪುರುಷರು, 9,10,751 ಮಹಿಳೆಯರು ಹಾಗೂ ಇತರೆ 94 ಸೇರಿ ಒಟ್ಟು 18,06,277 ಮತದಾರರಿದ್ದು, 1946 ಮತಗಟ್ಟೆ ಸ್ಥಾಪಿಸಲಾಗಿದೆ.