ಜಿಲ್ಲಾದ್ಯಂತ 63 ವಿಶೇಷ ಮತಗಟ್ಟೆಗಳ ಸ್ಥಾಪನೆಕನ್ನಡಪ್ರಭ ವಾರ್ತೆ ಬಾಗಲಕೋಟೆ ಮತದಾರರನ್ನು ಮತಗಟ್ಟೆಗಳಿಗೆ ಸೆಳೆಯುವ ನಿಟ್ಟಿನಲ್ಲಿ ಪ್ರತಿ ಮತಕ್ಷೇತ್ರಕ್ಕೆ 5 ಸಖಿ ಮತಗಟ್ಟೆ, ತಲಾ ಒಂದು ವಿಶೇಷ ಚೇತನರ, ಯುವಜನ ನಿರ್ವಹಣೆಯ, ಥೀಮ್ ಹಾಗೂ ಸಾಂಪ್ರದಾಯಿಕ ಮತಗಟ್ಟೆ ಸೇರಿದಂತೆ ಜಿಲ್ಲೆಯ 7 ಮತಕ್ಷೇತ್ರಗಳಲ್ಲಿ ಒಟ್ಟು 63 ವಿಶೇಷ ಮತಗಟ್ಟೆ ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ, ಜಿಪಂ ಸಿಇಒ ಶಶಿಧರ ಕುರೇರ ತಿಳಿಸಿದ್ದಾರೆ.